ವಿದೇಶದಿಂದ ಆಗಮಿಸುವವರಿಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಕೋವಿಡ್ ಪರೀಕ್ಷಾ ಸೌಲಭ್ಯ ಸಾಧ್ಯತೆ
ವಿದೇಶದಿಂದ ಆಗಮಿಸುವವರಿಗೆ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋವಿಡ್-19 ಪರೀಕ್ಷಾ ಸೌಲಭ್ಯ ಪ್ರಾರಂಭವಾಗಲಿದೆ.

ನವದೆಹಲಿ: ವಿದೇಶದಿಂದ ಆಗಮಿಸುವವರಿಗೆ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋವಿಡ್-19 ಪರೀಕ್ಷಾ ಸೌಲಭ್ಯ ಪ್ರಾರಂಭವಾಗಲಿದೆ.
ಪ್ರಯಾಣಿಕರಿಗೆ ಕೋವಿಡ್-19 ವರದಿ ನೆಗೆಟೀವ್ ಬಂದಲ್ಲಿ 7 ದಿನಗಳ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್ ನಿಂದ ವಿನಾಯ್ತಿ ಸಿಗಲಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ವಿದೇಶದಿಂದ ಬಂದ ಪ್ರಯಾಣಿಕರು ಕಡ್ಡಾಯವಾಗಿ 7 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್ ಹಾಗೂ 7 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಬೇಕಿದೆ.
"ದೆಹಲಿ ವಿಮಾನ ನಿಲ್ದಾಣದಲ್ಲಿ ಸರ್ಕಾರ ಕೋವಿಡ್-19 ಟೆಸ್ಟಿಂಗ್ ಸೌಲಭ್ಯ ಕಲ್ಪಿಸಲು ಚಿಂತನೆ ನಡೆಸಿದೆ. 8 ಗಂಟೆಗಳ ಅವಧಿಯಲ್ಲಿ ಪ್ರಯಾಣಿಕರಿಗೆ ವರದಿ ಲಭ್ಯವಾಗಲಿದೆ. ಅಷ್ಟು ಅವಧಿ ಪ್ರಯಾಣಿಕರು ವಿಮಾನ ನಿಲ್ದಾಣದ ಪ್ರಾಂಗಣದಲ್ಲೇ ಉಳಿಯಬೇಕಾಗುತ್ತದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಯಾಣಿಕರಿಗೆ ಸೋಂಕು ಪರೀಕ್ಷೆ ನೆಗೆಟೀವ್ ಬಂದರೆ ಸಾಂಸ್ಥಿಕ ಕ್ವಾರಂಟೈನ್ ನಿಂದ ಮುಕ್ತಿ ದೊರೆಯಲಿದೆ ಎಂದು ಸರ್ಕಾರಿ ಅಧಿಕಾರಿ ಹೇಳಿದ್ದಾರೆ. ಕೋವಿಡ್-19 ಹಿನ್ನೆಲೆಯಲ್ಲಿ ಮಾ.23 ರಿಂದ ಈ ವರೆಗೂ ಅಂತಾರಾಷ್ಟ್ರೀಯ ವಿಮಾನಗಳು ರದ್ದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


