ದೇಶ

ಕೊರೋನಾ ಸೋಂಕು; 24 ಗಂಟೆಗಳಲ್ಲಿ ದೇಶದಲ್ಲಿ ದಾಖಲೆಯ ಸೋಂಕಿತರು ಗುಣಮುಖ

ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಹೆಚ್ಚಾಗುತ್ತಿರುವಂತೆಯೇ ಇತ್ತ ನಿನ್ನೆ ಒಂದೇ ದಿನ ದೇಶಾದ್ಯಂತ ದಾಖಲೆ ಪ್ರಮಾಣದ ಸೋಂಕಿತರು ಗುಣಮುಖರಾಗಿದ್ದಾರೆ.

ಕೊರೋನಾ ಸೋಂಕು; 24 ಗಂಟೆಗಳಲ್ಲಿ ದೇಶದಲ್ಲಿ ದಾಖಲೆಯ ಸೋಂಕಿತರು ಗುಣಮುಖ
ಕೊರೋನಾ ವೈರಸ್
Published On :

ನವದೆಹಲಿ: ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಹೆಚ್ಚಾಗುತ್ತಿರುವಂತೆಯೇ ಇತ್ತ ನಿನ್ನೆ ಒಂದೇ ದಿನ ದೇಶಾದ್ಯಂತ ದಾಖಲೆ ಪ್ರಮಾಣದ ಸೋಂಕಿತರು ಗುಣಮುಖರಾಗಿದ್ದಾರೆ.

ನಿನ್ನೆ ಒಂದೇ ದಿನ ದೇಶಾದ್ಯಂತ 57,584 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಜಾರ್ಜ್ ಆಗಿದ್ದಾರೆ. ಅಂತೆಯೇ ನಿನ್ನೆ ಒಂದೇ ದಿನ ದೇಶದಲ್ಲಿ 55,079 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ. ದೇಶದಲ್ಲಿ ಇದೇ ಮೊದಲ ಬಾರಿಗೆ ದೇಶದಲ್ಲಿ ಹೊಸ ಸೋಂಕು ಪ್ರಕರಣಗಳಿಗಿಂತ ಗುಣಮುಖರ ಪ್ರಮಾಣ ಹೆಚ್ಚಾಗಿದೆ. 

ದೇಶದಲ್ಲಿ ಪ್ರಸ್ತುತ ಒಟ್ಟಾರೆ ಸೋಂಕಿತರ ಸಂಖ್ಯೆ 27,02,743ಕ್ಕೆ ಏರಿಕೆಯಾಗಿದ್ದು, ಈ ಪೈಕಿ 19,77,780 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಅಂತೆಯೇ ದೇಶದಲ್ಲಿ 6,73,166 ಸಕ್ರಿಯ ಪ್ರಕರಣಗಳಿವೆ.

24 ಗಂಟೆಗಳಲ್ಲಿ 8.97 ಲಕ್ಷ ಕೋವಿಡ್ ಪರೀಕ್ಷೆ
ಇನ್ನು ದೇಶದಲ್ಲಿ ಇದೇ ಮೊದಲ ಬಾರಿಗೆ 24 ಗಂಟೆಗಳ ಅವಧಿಯಲ್ಲಿ  8.97 ಲಕ್ಷ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು. ಇದು ಈ ವರೆಗಿನ ಗರಿಷ್ಠ ಪರೀಕ್ಷಾ ಪ್ರಮಾಣವಾಗಿದೆ. ಗರಿಷ್ಠ ಮಟ್ಟದ ಪರೀಕ್ಷಾ ಪ್ರಮಾಣದ ಹೊರತಾಗಿಯೂ ದೇಶದಲ್ಲಿ ಸೋಂಕಿನ ಪ್ರಮಾಣ ಶೇ.8.81ರಷ್ಟಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.