ಶಿಕ್ಷಣ ಸಚಿವಾಲಯವಾದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ: ರಾಷ್ಟ್ರಪತಿ ಕೋವಿಂದ್ ಅಂಕಿತ
ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವನ್ನು ಶಿಕ್ಷಣ ಸಚಿವಾಲಯವಾಗಿ ಮರುನಾಮಕರಣ ಮಾಡಲು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸೋಮವಾರ ಸಮ್ಮತಿ ನೀಡಿದ್ದಾರೆ.

ನವದೆಹಲಿ: ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವನ್ನು ಶಿಕ್ಷಣ ಸಚಿವಾಲಯವಾಗಿ ಮರುನಾಮಕರಣ ಮಾಡಲು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸೋಮವಾರ ಸಮ್ಮತಿ ನೀಡಿದ್ದಾರೆ.
ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್ಇಪಿ) ಕರಡಿನಲ್ಲಿ ಪ್ರಸ್ತಾಪಿಸಲಾಗಿದ್ದ ಪ್ರಮುಶ ಶಿಫಾರಸ್ಸುಗಳಲ್ಲಿ ಸಚಿವಾಲಯದ ಹೆಸರು ಮರುನಾಮಕರಣವೂ ಸೇರಿತ್ತು. ಪ್ರಸ್ತಾಪನನೆಗೆ ಕೇಂದ್ರ ಸಚಿವ ಸಂಪುಟ ಕಳೆದ ತಿಂಗಳು ಅನುಮೋದನೆ ನೀಡಿತ್ತು.
ಸೋಮವಾರ ರಾತ್ರಿ ಪ್ರಕಟಿಸಲಾಗಿರುವ ಗೆಜೆಟೆಡ್ ನೋಟಿಫಿಕೇಷನ್ ನಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಹೆಸರನ್ನು ಶಿಕ್ಷಣ ಸಚಿವಾಲಯವಾಗಿ ಬದಲಿಸಲು ರಾಷ್ಟ್ರಪತಿ ಒಪ್ಪಿಗೆ ನೀಡಿರುವುದಾಗಿ ತಿಳಿಸಲಾಗಿದೆ.
1985ರಲ್ಲಿ ಅಂದಿನ ಪ್ರಧಾನಿ ರಾಜೀವ್ ಗಾಂಧಿ ಅವರ ಆಡಳಿತಾವಧಿಯಲ್ಲಿ 'ಶಿಕ್ಷಣ ಸಚಿವಾಲಯವು' ಮಾನವ ಸಂಪನ್ಮೂಲ ಸಚಿವಾಲಯವಾಗಿ ಬದಲಾಯಿತು. 1986ರಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಪರಿಚಯಿಸಲಾಯಿತು ಹಾಗೂ 1992ರಲ್ಲಿ ಅದಕ್ಕೆ ತಿದ್ದುಪತಿ ತರಲಾಯಿತು.ರಾಜೀವ್ ಗಾಂಧಿ ಅವರ ಸಚಿವ ಸಂಪುಟದಲ್ಲಿ ಪಿ.ವಿ.ನರಸಿಂಹ ರಾವ್ ಅವರು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಮೊದಲ ಸಚಿವರಾಗಿದ್ದರು.
ಇಸ್ರೊ ಮಾಜಿ ಅಧ್ಯಕ್ಷ ಕೆ.ಕಸ್ತೂರಿರಂಗನ್ ಅವರ ನೇತೃತ್ವದಲ್ಲಿ ಸಮಿತಿಯು ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸುವ ಕಾರ್ಯ ನಡೆಸಿತು. ಆ ಸಮಿತಿಯು ಸಚಿವಾಲಯದ ಹೆಸರು ಬದಲಿಸಲು ಶಿಫಾರಸ್ಸು ಮಾಡಿತು. ಇಂದಿರಾ ಗಾಂಧಿ ರಾಷ್ಟ್ರೀಯ ಕಲಾ ಕೇಂದ್ರದ ಅಧ್ಯಕ್ಷರಾದ ರಾಮ್ ಬಹದೂರ್ ರಾಯ್ 2018ರಲ್ಲಿ ಅದೇ ವಿಚಾರವನ್ನು ಮತ್ತೊಮ್ಮೆ ಪ್ರಸ್ತಾಪಿಸಿದ್ದು ಚರ್ಚೆಯಾಗಿತ್ತು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


