ಕೋವಿಡ್-19; ಅಮಿತ್ ಶಾ ಗೆ ಮೈಕೈ ನೋವು, ಬಳಲಿಕೆ, ಮತ್ತೆ ಏಮ್ಸ್ ಆಸ್ಪತ್ರೆಗೆ ದಾಖಲು!
ಇತ್ತೀಚಿಗೆ ಕೊರೋನಾ ವೈರಸ್ ಸೋಂಕಿನಿಂದ ಗುಣಮುಖರಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ನವದೆಹಲಿ: ಇತ್ತೀಚಿಗೆ ಕೊರೋನಾ ವೈರಸ್ ಸೋಂಕಿನಿಂದ ಗುಣಮುಖರಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಳಲಿಕೆ ಮತ್ತು ಮೈ ಕೈ ನೋವಿಂದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಲ್ಲಿನ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಕೆಲವು ದಿನಗಳ ಹಿಂದೆ ಅವರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಸೋಂಕಿನ ಪರೀಕ್ಷಾ ವರದಿ ನೆಗೆಟಿವ್ ಬಂದಿದ್ದರಿಂದ ಗುರುಗ್ರಾಮದಲ್ಲಿರುವ ಮೆದಾಂತ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.
ಸದ್ಯ ಅಮಿತ್ ಶಾರ ಕೊವಿಡ್ ಪರೀಕ್ಷೆ ನೆಗೆಟಿವ್ ಬಂದಿದ್ದು ಸಚಿವರು ಆಸ್ಪತ್ರೆಯಿಂದಲೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


