ರಾಹುಲ್ ಗಾಂಧಿ ಮಾತಿನಂತೆ ಗಾಂಧಿಯೇತರ ವ್ಯಕ್ತಿಗಳು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಬೇಕು: ಪ್ರಿಯಾಂಕಾ ವಾದ್ರಾ
ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಗಾಂಧಿಯೇತರ ವ್ಯಕ್ತಿಗಳ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಲೇಬೇಕು ಎಂದು ಹೇಳಿದ್ದಾರೆ.

ನವದೆಹಲಿ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಗಾಂಧಿಯೇತರ ವ್ಯಕ್ತಿಗಳ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಲೇಬೇಕು ಎಂದು ಹೇಳಿದ್ದಾರೆ.
ಇಂಡಿಯಾ ಟುಮಾರೊ: ಮುಂದಿನ ತಲೆಮಾರಿನ ರಾಜಕೀಯ ನಾಯಕರೊಂದಿಗೆ ಸಂಭಾಷಣೆಗಳು ಪುಸ್ತಕದಲ್ಲಿ ಪ್ರಿಯಾಂಕಾ ಗಾಂಧಿ ಹೇಳಿಕೆಯನ್ನು ಅಮೆರಿಕಾದ ಶಿಕ್ಷಣ ತಜ್ಞರಾದ ಪ್ರದೀಪ್ ಚಿಬ್ಬರ್ ಮತ್ತು ಹರ್ಷ್ ಷಾ ಬರೆದಿದ್ದಾರೆ.
ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ಬಳಿಕ ರಾಹುಲ್ ಗಾಂಧಿ ಅವರು ಗಾಂಧಿಯೇತರ ವ್ಯಕ್ತಿಗಳು ಪಕ್ಷದ ಮುಖ್ಯಸ್ಥರಾಗಬೇಕು ಎಂದು ಹೇಳಿದ್ದರು. ಈ ಅಭಿಪ್ರಾಯಕ್ಕೆ ನನ್ನ ಒಪ್ಪಿಗೆ ಇತ್ತು ಎಂದು ಪ್ರಿಯಾಂಕಾ ತಿಳಿಸಿದ್ದಾರೆ.
ರಾಹುಲ್ ರಾಜಿನಾಮೆ ಬೆನ್ನಲ್ಲೇ ಸೋನಿಯಾ ಗಾಂಧಿ ಅಧ್ಯಕ್ಷೆಯಾಗಿ ಮತ್ತೆ ನೇಮಕಗೊಂಡಿದ್ದರು. ಈ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ ಹುಟ್ಟು ಹಾಕಿತ್ತು. ಗಾಂಧಿಯೇತರರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಲು ಅರ್ಹತೆ ಇಲ್ಲವೆ ಎಂಬ ಮಾತುಗಳು ಕೇಳಿಬಂದಿತ್ತು. ಅಲ್ಲದೆ ಸೋನಿಯಾ ಬಳಿಕ ಪ್ರಿಯಾಂಕಾ ಗಾಂಧಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಬೇಕು ಎಂಬ ಮಾತು ಕೇಳಿ ಬಂದಿತ್ತು.
ಈ ಸಮಯದಲ್ಲೇ ಪ್ರಿಯಾಂಕಾ ಗಾಂಧಿಯ ಹೇಳಿಕೆ ಇದೀಗ ಹೆಚ್ಚು ಚರ್ಚೆಗೆ ಗ್ರಾಸವಾಗಿದೆ. ಆದರೆ ಈ ಹೇಳಿಕೆ 15 ತಿಂಗಳ ಹಿಂದೆ ನೀಡಲಾಗಿತ್ತು ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


