'ಸುಪ್ರೀಂ' ಆದೇಶ ನ್ಯಾಯಾಂಗದ ಮೇಲಿನ ನಂಬಿಕೆಯನ್ನು ಬಲಗೊಳಿಸಿದ್ದು, ಮಹಾರಾಷ್ಟ್ರ ಸರ್ಕಾರ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ: ಫಡ್ನವೀಸ್
ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ಸಿಬಿಐ ತನಿಖೆ ಆದೇಸ ನ್ಯಾಯಾಂಗ ವ್ಯವಸ್ಥೆ ಮೇಲಿನ ನಂಬಿಕೆಯನ್ನು ಮತ್ತಷ್ಟು ಬಲಗೊಳ್ಳುವಂತೆ ಮಾಡಿದ್ದು, ಮಹಾರಾಷ್ಟ್ರ ಸರ್ಕಾರ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ ಎಂದು ಮಹಾರಾಷ್ಟ್ರ ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ಸಿಬಿಐ ತನಿಖೆ ಆದೇಸ ನ್ಯಾಯಾಂಗ ವ್ಯವಸ್ಥೆ ಮೇಲಿನ ನಂಬಿಕೆಯನ್ನು ಮತ್ತಷ್ಟು ಬಲಗೊಳ್ಳುವಂತೆ ಮಾಡಿದ್ದು, ಮಹಾರಾಷ್ಟ್ರ ಸರ್ಕಾರ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ ಎಂದು ಮಹಾರಾಷ್ಟ್ರ ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಬುಧವಾರ ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಸುಪ್ರೀಂಕೋರ್ಟ್ ಆದೇಶ ನ್ಯಾಯಾಂಗ ವ್ಯವಸ್ಥೆ ಮೇಲಿನ ನಂಬಿಕೆಯನ್ನು ಬಲಗೊಳಿಸಿದೆ. ಇದೀಗ ಮಹಾರಾಷ್ಟ್ರ ಸರ್ಕಾರ ಪ್ರಕರಣದ ತನಿಖೆ ಮಾಡಿದ ರೀತಿಯನ್ನು ಅತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ ಎಂದು ಹೇಳಿದ್ದಾರೆ.
ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣ ಸಂಬಂಧ ಮಹತ್ವದ ಆದೇಶ ನೀಡಿರುವ ಸುಪ್ರೀಂಕೋರ್ಟ್, ಸಾವಿನ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಇದಕ್ಕೆ ಸಂಬಂಧಪಟ್ಟ ಎಲ್ಲಾ ಸಾಕ್ಷಿಗಳು, ದಾಖಲೆಗಳನ್ನು ಮುಂಬೈ ಪೊಲೀಸರು ಸಿಬಿಐಗೆ ಹಸ್ತಾಂತರಿಸುವಂತೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


