ದೇಶ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ ಮತ್ತಷ್ಟು ಕ್ಷೀಣಿಸಿದೆ: ಸೇನಾ ಆಸ್ಪತ್ರೆ ಮಾಹಿತಿ

ಪ್ರಣಬ್ ಮುಖರ್ಜಿಯವರ ಆರೋಗ್ಯದಲ್ಲಿ ಚೇತರಿಕೆ ಲಕ್ಷಣಗಳು ಕಂಡು ಬರುತ್ತಿದೆ ಎಂದು ಪುತ್ರ ಅಭಿಜಿತ್ ಮುಖರ್ಜಿಯವರು ಬುಧವಾರ ಹೇಳಿದ್ದಾರೆ.

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ ಮತ್ತಷ್ಟು ಕ್ಷೀಣಿಸಿದೆ: ಸೇನಾ ಆಸ್ಪತ್ರೆ ಮಾಹಿತಿ
ಅಭಿಜಿತ್ ಮುಖರ್ಜಿ
Published On :

ನವದೆಹಲಿ: ಪ್ರಣಬ್ ಮುಖರ್ಜಿಯವರು ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದು, ಆರೋಗ್ಯ ಸ್ಥಿತಿ ಮತ್ತಷ್ಟು ಕ್ಷೀಣಿಸುತ್ತಿದೆ ಎಂದು ಸೇನಾ ಆಸ್ಪತ್ರೆಯ ವೈದ್ಯರು ಎಂದು ಮಾಹಿತಿ ನೀಡಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಆಸ್ಪತ್ರೆಯ ವೈದ್ಯರು, ಪ್ರಣಬ್ ಮುಖರ್ಜಿಯವರು ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದು, ಆರೋಗ್ಯ ಸ್ಥಿತಿ ಮತ್ತಷ್ಟು ಕ್ಷೀಣಿಸುತ್ತಿದೆ. ವೆಂಟಿಲೇಟರ್ ಸಪೋರ್ಟ್'ನ್ನು ಮುಂದುವರೆಸಲಾಗುತ್ತಿದೆ. ನುರಿತ ವೈದ್ಯರ ತಂಡ ಪ್ರಣಬ್ ಮುಖರ್ಜಿ ಅವರ ಚಿಕಿತ್ಸೆ ಮೇಲ್ವಿಚಾರಣೆಯನ್ನು ನಿರಂತರವಾಗಿ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ. 

ಈ ನಡುವೆ ತಂದೆ ಆರೋಗ್ಯ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅಭಿಜಿತ್ ಮುಖರ್ಜಿ ಅವರು, ನಿಮ್ಮೆಲ್ಲರ ಹಾರೈಕೆ ಹಾಗೂ ಪ್ರಾರ್ಥನೆ, ವೈದ್ಯರ ಪ್ರಾಮಾಣಿಕ ಪರಿಶ್ರಮದಿಂದ ತಂದೆಯ ಆರೋಗ್ಯದಲ್ಲಿ ಚೇತರಿಕೆ ಲಕ್ಷಣಗಳು ಕಂಡು ಬರುತ್ತಿದೆ. ಇದೀಗ ನನ್ನ ತಂದೆ ಆರೋಗ್ಯ ಸ್ಥಿರವಾಗಿದೆ. ದೇಹದ ಉಷ್ಣಾಂಶ, ರಕ್ತದೊತ್ತಡ, ನಾಡಿಮಿಡಿತ, ಹೃದಯ ಬಡಿತ ಎಲ್ಲವೂ ನಿಯಂತ್ರಣದಲ್ಲಿದೆ. ಆರೋಗ್ಯದಲ್ಲಿ ಚೇತರಿಕೆ ಲಕ್ಷಣಗಳು ಕಂಡುಬಂದಿವೆ. ಆದಷ್ಟು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಮತ್ತಷ್ಟು ಪ್ರಾರ್ಥನೆ ಸಲ್ಲಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.