ದೇಶ

ರಾಜೀವ್ ಗಾಂಧಿ ಜನ್ಮದಿನ: ಗೌರವ ಸಲ್ಲಿಸಿದ ಪ್ರಧಾನಿ ಮೋದಿ

ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ್ ಗಾಂಧಿಯವರ 76ನೇ ಜನ್ಮದಿನ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಗೌರವ ಸಲ್ಲಿಸಿದ್ದಾರೆ.

ರಾಜೀವ್ ಗಾಂಧಿ ಜನ್ಮದಿನ: ಗೌರವ ಸಲ್ಲಿಸಿದ ಪ್ರಧಾನಿ ಮೋದಿ
ಪ್ರಧಾನಿ ಮೋದಿ, ರಾಜೀವ್ ಗಾಂಧಿ (ಸಂಗ್ರಹ ಚಿತ್ರ)
Published On :

ನವದೆಹಲಿ: ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ್ ಗಾಂಧಿಯವರ 76ನೇ ಜನ್ಮದಿನ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಗೌರವ ಸಲ್ಲಿಸಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ರಾಜೀವ್ ಗಾಂಧಿಯವರಿಗೆ 76ನೇ ಜನ್ಮದಿನದ ಹಿನ್ನೆಲೆಯಲ್ಲಿ ಅವರಿಗೆ ನನ್ನ ಗೌರವಾರ್ಪಣೆ ಎಂದು ಬರೆದಿದ್ದಾರೆ. 

ಆಗಸ್ಟ್ 20, 1944 ರಂದು ಜನಿಸಿದ್ದ ರಾಜೀವ್ ಗಾಂಧಿ ಅವರು, 1984 ರ ಅಕ್ಟೋಬರ್‌ ತಿಂಗಳಿನಲ್ಲಿ ಅಧಿಕಾರ ವಹಿಸಿಕೊಂಡಾಗ ಭಾರತದ ಅತ್ಯಂತ ಕಿರಿಯ ಪ್ರಧಾನಿಯಾಗಿದ್ದರು. ರಾಜೀವ್ ಗಾಂಧಿಯವರು ಡಿಸೆಂಬರ್ 2, 1989 ರವರೆಗೆ ಭಾರತದ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸಿದರು.

ಮೇ 1991 ರಲ್ಲಿ, ರಾಜೀವ್ ಗಾಂಧಿ ಅವರನ್ನು ತಮಿಳುನಾಡಿನ ಶ್ರೀಪೆರುಂಬುದೂರಿನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಲಿಬರೇಶನ್ ಟೈಗರ್ಸ್ ಆಫ್ ತಮಿಳು ಈಲಂ (ಎಲ್‌ಟಿಟಿಇ)ಗೆ ಸೇರಿದ ವ್ಯಕ್ತಿಯೊಬ್ಬರು ಆತ್ಮಾಹುತಿ ಬಾಂಬ್ ದಾಳಿ ನಡೆಸಿ ಹತ್ಯೆ ಮಾಡಿದ್ದರು. ಕಾಂಗ್ರೆಸ್ ಪಕ್ಷವು ಈ ದಿನವನ್ನು 'ಸದ್ಭಾವನಾ ದಿನ' ವೆಂದು ಆಚರಿಸುತ್ತದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.