ದೇಶ

ಕೋವಿಡ್-19: ದೇಶದಲ್ಲಿ 24 ಗಂಟೆಗಳಲ್ಲಿ ದಾಖಲೆಯ 9 ಲಕ್ಷಕ್ಕೂ ಹೆಚ್ಚು ಪರೀಕ್ಷೆ ನಡೆಸಲಾಗಿದೆ- ಆರೋಗ್ಯ ಸಚಿವಾಲಯ

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 9 ಲಕ್ಷಕ್ಕೂ ಹೆಚ್ಚು ಕೊರೋನಾ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೋವಿಡ್-19: ದೇಶದಲ್ಲಿ 24 ಗಂಟೆಗಳಲ್ಲಿ ದಾಖಲೆಯ 9 ಲಕ್ಷಕ್ಕೂ ಹೆಚ್ಚು ಪರೀಕ್ಷೆ ನಡೆಸಲಾಗಿದೆ- ಆರೋಗ್ಯ ಸಚಿವಾಲಯ
ಸಂಗ್ರಹ ಚಿತ್ರ
Published On :

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 9 ಲಕ್ಷಕ್ಕೂ ಹೆಚ್ಚು ಕೊರೋನಾ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಪರೀಕ್ಷೆಗಳ ಸಂಖ್ಯೆ ಹೆಚ್ಚಾದಂತೆ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಶೇ.8ಕ್ಕೆ ಇಳಿದಿದ್ದು, ಪ್ರತೀನಿತ್ಯ ದೊಡ್ಡ ಮಟ್ಟದಲ್ಲಿಯೇ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಇದರಂತೆ ಕಳೆದ 24 ಗಂಟೆಗಳಲ್ಲಿ 9 ಲಕ್ಷಕ್ಕೂ ಹೆಚ್ಚು ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ. 

ಕೊರೋನಾ ಮಟ್ಟಹಾಕಲು "ಟೆಸ್ಟ್, ಟ್ರ್ಯಾಕ್ ಮತ್ತು ಟ್ರೀಟ್" ತಂತ್ರವನ್ನು ಅನುಸರಿಸುತ್ತಿರುವ ಭಾರತದವು, ಇದರ ಅನುಸಾರವಾಗಿ, ದಿನಕ್ಕೆ 10 ಲಕ್ಷ ಪರೀಕ್ಷೆಗಳನ್ನು ನಡೆಸಲು ಪ್ರಯತ್ನಗಳನ್ನು ನಡೆಸುತ್ತಿದೆ. 

ಸೋಂಕಿತರ ಸಂಖ್ಯೆ ಹೆಚ್ಚು ದಾಖಲಾಗುತ್ತಿರುವ ನಡುವಲ್ಲೂ ಚೇತರಿಸಿಕೊಳ್ಳುತ್ತಿರುವವರ ಪ್ರಮಾಣ ಕೂಡ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 60,000 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಒಂದೇ ದಿನ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಜನರು ಗುಮಮುಖರಾಗಿರುವುದು ಇದೇ ಮೊದಲಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.