ಕೋವಿಡ್-19: ನಿನ್ನೆ ಒಂದೇ ದಿನ ಅತ್ಯಂತ ಹೆಚ್ಚಿನ 62,282 ಸೋಂಕಿತರು ಗುಣಮುಖ, 29 ಲಕ್ಷ ಗಡಿ ದಾಟಿದ ಪ್ರಕರಣಗಳು
ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 68 ಸಾವಿರದ 898 ಹೊಸ ಪ್ರಕರಣಗಳೊಂದಿಗೆ ಕೋವಿಡ್-19 ಪ್ರಕರಣಗಳ ಸಂಖ್ಯೆ 29 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ತಿಳಿಸಿದೆ.

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 68 ಸಾವಿರದ 898 ಹೊಸ ಪ್ರಕರಣಗಳೊಂದಿಗೆ ಕೋವಿಡ್-19 ಪ್ರಕರಣಗಳ
ಸಂಖ್ಯೆ 29 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ತಿಳಿಸಿದೆ. ದೇಶದಲ್ಲಿ ಈಗ ಒಟ್ಟಾರೇ 29 ಲಕ್ಷದ 05 ಸಾವಿರದ 824 ಪ್ರಕರಣಗಳು ಕಂಡುಬಂದಿವೆ.
ನಿನ್ನೆ ಒಂದೇ ದಿನ ಅತ್ಯಂತ ಹೆಚ್ಚಿನ 62, 282 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.ಈ ಮೂಲಕ ಒಟ್ಟಾರೇ ಗುಣಮುಖರಾದವರ ಸಂಖ್ಯೆ 21 ಲಕ್ಷದ 58 ಸಾವಿರದ 946 ಆಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
6,92,028 ಸಕ್ರಿಯ ಪ್ರಕರಣಗಳಿದ್ದು, 21, 58,947 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 983 ಸೋಂಕಿತರು ಮೃತಪಡುವುದರೊಂದಿಗೆ ಒಟ್ಟಾರೇ ಮೃತರ ಸಂಖ್ಯೆ 54, 849 ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


