ಕೋವಿಡ್-19: ದೇಶದಲ್ಲಿ 24 ಗಂಟೆಗಳಲ್ಲಿ 8 ಲಕ್ಷಕ್ಕೂ ಕೊರೋನಾ ಪರೀಕ್ಷೆ: ಐಸಿಎಂಆರ್
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 8 ಲಕ್ಷಕ್ಕೂ ಅಧಿಕ ಕೊರೋನಾ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಮಾಹಿತಿ ನೀಡಿದೆ.

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 8 ಲಕ್ಷಕ್ಕೂ ಅಧಿಕ ಕೊರೋನಾ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಮಾಹಿತಿ ನೀಡಿದೆ.
ಅಂತೆಯೇ ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಕೇಂದ್ರ ಆರೋಗ್ಯ ಸಚಿವಾಲಯ ಆಗಸ್ಚ್ 20 ಗುರುವಾರದಂದು ದೇಶಾದ್ಯಂತ 1504 ಲ್ಯಾಂಬ್ ಗಳಲ್ಲಿ 8,05,985 ಲಕ್ಷ ಕೋವಿಡ್ ಪರೀಕ್ಷೆಗಳನ್ನು ಮಾಡಲಾಗಿದೆ. ಈ ಪೈಕಿ 978 ಸರ್ಕಾರಿ ಲ್ಯಾಬ್ ಗಳಿದ್ದು, 526 ಖಾಸಗಿ ಲ್ಯಾಬ್ ಗಳಿವೆ.
ನಿನ್ನೆ 8,05,985 ಲಕ್ಷ ಕೋವಿಡ್ ಪರೀಕ್ಷೆಗಳನ್ನು ಮಾಡಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ 3,34,67,237 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ.
ಇನ್ನು ಕೊರೋನಾ ಮಟ್ಟಹಾಕಲು "ಟೆಸ್ಟ್, ಟ್ರ್ಯಾಕ್ ಮತ್ತು ಟ್ರೀಟ್" ತಂತ್ರವನ್ನು ಅನುಸರಿಸುತ್ತಿರುವ ಭಾರತವು, ಇದರ ಅನುಸಾರವಾಗಿ, ದಿನಕ್ಕೆ 10 ಲಕ್ಷ ಪರೀಕ್ಷೆಗಳನ್ನು ನಡೆಸಲು ಪ್ರಯತ್ನಗಳನ್ನು ನಡೆಸುತ್ತಿದೆ. ಸೋಂಕಿತರ ಸಂಖ್ಯೆ ಹೆಚ್ಚು ದಾಖಲಾಗುತ್ತಿರುವ ನಡುವಲ್ಲೂ ಚೇತರಿಸಿಕೊಳ್ಳುತ್ತಿರುವವರ ಪ್ರಮಾಣ ಕೂಡ ಹೆಚ್ಚಾಗುತ್ತಿದೆ. ದೇಶದಲ್ಲಿ ಒಟ್ಟಾರೆ ಸೋಂಕಿತರ ಪೈಕಿ ಶೇ.74.43ರಷ್ಟು ಅಂದರೆ 2,158,946 ಸೋಂಕಿತರು ಸೋಂಕಿನಿಂದ ಗುಣಮುಖರಾಗಿದ್ದು, ಶೇ.21.81ರಷ್ಟು ಅಂದರೆ 692,028 ಸೋಂಕಿತರು (ಸಕ್ರಿಯ ಪ್ರಕರಣಗಳು)ದೇಶದ ವಿವಿಧೆಡೆ ಚಿಕಿತ್ಸೆ ಪಡೆಯತ್ತಿದ್ದಾರೆ.
#COVID19 Update!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


