ದೇಶ

ಕೊರೋನಾ ಸಾಂಕ್ರಾಮಿಕ: 24 ಗಂಟೆಗಳಲ್ಲಿ ದೇಶಾದ್ಯಂತ 68,898 ಸೋಂಕು ಪ್ರಕರಣಗಳು ಪತ್ತೆ

ಭಾರತದಲ್ಲಿ ಮಾರಕ ಕೊರೋನಾ ಸೋಂಕಿನ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 68,898 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ಕೊರೋನಾ ಸಾಂಕ್ರಾಮಿಕ: 24 ಗಂಟೆಗಳಲ್ಲಿ ದೇಶಾದ್ಯಂತ 68,898 ಸೋಂಕು ಪ್ರಕರಣಗಳು ಪತ್ತೆ
ಸಂಗ್ರಹ ಚಿತ್ರ
Published On :

ನವದೆಹಲಿ: ಭಾರತದಲ್ಲಿ ಮಾರಕ ಕೊರೋನಾ ಸೋಂಕಿನ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 68,898 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ಇನ್ನೇನು ಇಳಿಮುಖವಾಗುತ್ತಿದೆ ಎನ್ನುವಾಗಲೇ ದೇಶದಲ್ಲಿ ಮತ್ತೆ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 68,898 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ  29,05,824ಕ್ಕೆ ಏರಿಕೆಯಾಗಿದೆ.

ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 983 ಕೊರೋನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಆ ಮೂಲಕ ಮಾರಕ ಕೋವಿಡ್-19ಗೆ ದೇಶದಲ್ಲಿ ಬಲಿಯಾದವರ ಸಂಖ್ಯೆ 54,849ಕ್ಕೆ ಏರಿಕೆಯಾಗಿದೆ. ಅಂತೆಯೇ ದೇಶದಲ್ಲಿ ಮರಣ ಪ್ರಮಾಣ ಕೂಡ ಶೇ.2ಕ್ಕಿಂತ ಕಡಿಮೆಗೆ ಕುಸಿತ ಕಂಡಿದ್ದು, ದೇಶದಲ್ಲಿ ಪ್ರಸ್ತುತ ಕೋವಿಡ್-19 ಮರಣ ಪ್ರಮಾಣ ಕೇವಲ ಶೇ.1.89ರಷ್ಟಿದೆ. 

ಇನ್ನು ದೇಶದಲ್ಲಿ ಒಟ್ಟಾರೆ ಸೋಂಕಿತರ ಪೈಕಿ ಶೇ.74.43ರಷ್ಟು ಅಂದರೆ 2,158,946 ಸೋಂಕಿತರು ಸೋಂಕಿನಿಂದ ಗುಣಮುಖರಾಗಿದ್ದು, ಶೇ.21.81ರಷ್ಟು ಅಂದರೆ 692,028 ಸೋಂಕಿತರು (ಸಕ್ರಿಯ ಪ್ರಕರಣಗಳು)ದೇಶದ ವಿವಿಧೆಡೆ ಚಿಕಿತ್ಸೆ ಪಡೆಯತ್ತಿದ್ದಾರೆ.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.