ಭಾರತದಲ್ಲಿ ಮಹಾಮಾರಿ ಕೊರೋನಾ ಚೇತರಿಕೆ ಪ್ರಮಾಣ ಶೇ. 75ಕ್ಕೆ ಏರಿಕೆ
ಕಳೆದ 24 ಗಂಟೆಗಳಲ್ಲಿ ಕೊವಿಡ್‍ನ 69,239 ಹೊಸ ಪ್ರಕರಣಗಳು ವರದಿಯಾಗುವುದರೊಂದಿಗೆ ದೇಶದಲ್ಲಿ ಸೋಂಕಿನ ಒಟ್ಟು ಪ್ರಕರಣಗಳ ಸಂಖ್ಯೆ ಭಾನುವಾರ 30 ಲಕ್ಷ ದಾಟಿದೆ.

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಕೊವಿಡ್‍ನ 69,239 ಹೊಸ ಪ್ರಕರಣಗಳು ವರದಿಯಾಗುವುದರೊಂದಿಗೆ ದೇಶದಲ್ಲಿ ಸೋಂಕಿನ ಒಟ್ಟು ಪ್ರಕರಣಗಳ ಸಂಖ್ಯೆ ಭಾನುವಾರ 30 ಲಕ್ಷ ದಾಟಿದೆ.
ಆದರೆ ಚೇತರಿಕೆ ಪ್ರಮಾಣ ನಿರಂತರವಾಗಿ ಹೆಚ್ಚುತ್ತಿದ್ದು, ಸದ್ಯ ಈ ಪ್ರಮಾಣ ಶೇ ಸುಮಾರು ಶೇ. 75ರಷ್ಟಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯಂತೆ ದೇಶದಲ್ಲಿ ಈವರೆಗೆ ಒಟ್ಟು ಪ್ರಕರಣಗಳ ಸಂಖ್ಯೆ 30,44,940ಕ್ಕೆ ಏರಿದ್ದು, ಇದರಲ್ಲಿ 7,07,668 ಸಕ್ರಿಯ ಪ್ರಕರಣಗಳಿವೆ. ಒಟ್ಟು ಚೇತರಿಕೆ ಸಂಖ್ಯೆ 22,80,566 ರಷ್ಟಿದ್ದು, ಚೇತರಿಕೆ ಪ್ರಮಾಣ ಶೇ 74.90ಕ್ಕೆ ತಲುಪಿದೆ.
ಒಂದೇ ದಿನ ಜನರು ಚೇತರಿಕೆ ಕಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಸಚಿಲವಾಯ ಮಾಹಿತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


