ಚಲನಚಿತ್ರ, ಧಾರಾವಾಹಿ ಚಿತ್ರೀಕರಣಕ್ಕೆ ಕೇಂದ್ರ ಸರ್ಕಾರ ಅನುಮತಿ
ಸಿನಿಮಾ ಮತ್ತು ಟಿವಿ ಕಾರ್ಯಕ್ರಮಗಳ ಚಿತ್ರೀಕರಣಗಾಗಿ ಮಾರ್ಗಸೂಚಿ ಬಿಡುಗಡೆಯಾಗಿದ್ದು, ಕೇಂದ್ರ ವಾರ್ತಾ ಸಚಿವ ಪ್ರಕಾಶ್ ಜಾವಡೇಕರ್ ಇಂದಿಲ್ಲಿ ಪ್ರಕಟಿಸಿದ್ದಾರೆ.

ನವದೆಹಲಿ: ಸಿನಿಮಾ ಮತ್ತು ಟಿವಿ ಕಾರ್ಯಕ್ರಮಗಳ ಚಿತ್ರೀಕರಣಗಾಗಿ ಮಾರ್ಗಸೂಚಿ ಬಿಡುಗಡೆಯಾಗಿದ್ದು, ಕೇಂದ್ರ ವಾರ್ತಾ ಸಚಿವ ಪ್ರಕಾಶ್ ಜಾವಡೇಕರ್ ಇಂದಿಲ್ಲಿ ಪ್ರಕಟಿಸಿದ್ದಾರೆ.
ಅಭಿನಯಿಸುವವರು ಅಲ್ಲದೇ, ಚಿತ್ರೀಕರಣದಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರು ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಪಾಲನೆ ಮಾಡಬೇಕು ಎಂದಿದ್ದಾರೆ. ಆರೋಗ್ಯ ಸಚಿವಾಲಯದ ಜೊತೆಗೆ ಸಮಾಲೋಚಿಸಿ ಮಾರ್ಗಸೂಚಿ ಅಭಿವೃದ್ಧಿಪಡಿಸಿರುವುದಾಗಿ ಸಚಿವರು ಹೇಳಿದ್ದಾರೆ.
ಮಾರ್ಗಸೂಚಿ ಬಿಡುಗಡೆಯಿಂದ ಸಿನಿಮಾ, ಟಿವಿ ಧಾರವಾಹಿಗಳು ಪುನರ್ ಆರಂಭಗೊಳ್ಳುವುದರೊಂದಿಗೆ ಉದ್ಯೋಗವಕಾಶಗಳು ಸೃಷ್ಟಿಯಾಗುವ ಭರವಸೆ ಹೊಂದಿರುವುದಾಗಿ ಸಚಿವರು ತಿಳಿಸಿದ್ದಾರೆ.
ಕೊರೋನಾವೈರಸ್ ದೇಶದಲ್ಲಿ ಕಾಣಿಸಿಕೊಂಡ ಬಳಿಕ ಸಿನಿಮಾ, ಟಿವಿ ಧಾರವಾಹಿಗಳ ಚಿತ್ರೀಕರಣವನ್ನು ರದ್ದುಪಡಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


