ದೇಶ

ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮನದ ಮಾತನ್ನು ಕೇಳಲಿ- ರಾಹುಲ್ ಗಾಂಧಿ 

ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮನದ ಮಾತು ಕೇಳಲಿ ಮತ್ತು ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಐಐಟಿ ಮತ್ತು ವೈದ್ಯಕೀಯ ಕೋರ್ಸ್ ಗಳಿಗಾಗಿ ಜೆಇಇ ಮತ್ತು ಎನ್ ಇಇಟಿ ಪರೀಕ್ಷೆಗಳು ಮುಂದೂಡಲಿ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮನದ ಮಾತನ್ನು ಕೇಳಲಿ- ರಾಹುಲ್ ಗಾಂಧಿ 
ರಾಹುಲ್ ಗಾಂಧಿ
Published On :

ನವದೆಹಲಿ: ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮನದ ಮಾತು ಕೇಳಲಿ ಮತ್ತು ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಐಐಟಿ ಮತ್ತು ವೈದ್ಯಕೀಯ ಕೋರ್ಸ್ ಗಳಿಗಾಗಿ ಜೆಇಇ ಮತ್ತು ಎನ್ ಇಇಟಿ ಪರೀಕ್ಷೆಗಳು ಮುಂದೂಡಲಿ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ಎನ್ ಇಇಟಿ, ಜೆಇಇ ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳ ಮನದ ಮಾತನ್ನು ಕೇಂದ್ರ ಸರ್ಕಾರ ಕೇಳಬೇಕು, ನಂತರ  ಸ್ವೀಕರಿಸಹಬಹುದಾದ  ಪರಿಹಾರಕ್ಕೆ ಬರಲಿ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. 

ಪರೀಕ್ಷೆ ಮುಂದೂಡುವಂತೆ ಪೋಷಕರು ಸಲ್ಲಿಸಿರುವ ಅರ್ಜಿ ಸುಪ್ರೀಂಕೋರ್ಟಿನಲ್ಲಿ ವಿಚಾರಣೆಗೆ ಬರುತ್ತಿರುವಂತೆಯೇ ರಾಹುಲ್ ಗಾಂಧಿ  ಪೋಷಕರ ಬೇಡಿಕೆಯನ್ನು ಬೆಂಬಲಿಸಿದ್ದಾರೆ.

ಪರ್ಯಾಯ ವ್ಯವಸ್ಥೆ ಮಾಡುವುದರ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಬೇಕೆಂದು ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೊಡಿಯಾ ಹೇಳಿಕೆ ನೀಡಿದ ನಂತರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.