ಡಿಆರ್‌ಡಿಒ ಮುಖ್ಯಸ್ಥ ಜಿ.ಸತೀಶ್ ರೆಡ್ಡಿ ಕಾರ್ಯಾವಧಿ 2 ವರ್ಷ ವಿಸ್ತರಣೆ: ಕೇಂದ್ರ ಸರ್ಕಾರ
ಪ್ರಮುಖ ಬೆಳವಣಿಗೆಯಲ್ಲಿ ರಕ್ಷಣಾ ಸಂಶೋಧನಾ ಅಭಿವೃದ್ಧಿ ಸಂಸ್ಥೆಯ ಮುಖ್ಯಸ್ಥ ಜಿ.ಸತೀಶ್ ರೆಡ್ಡಿ ಅವರ ಕಾರ್ಯಾವಧಿಯನ್ನು ಕೇಂದ್ರ ಸರ್ಕಾರ ಇನ್ನೂ 2 ವರ್ಷಗಳ ಕಾಲ ವಿಸ್ತರಿಸಿ ಆದೇಶ ಹೊರಡಿಸಿದೆ.

ನವದೆಹಲಿ: ಪ್ರಮುಖ ಬೆಳವಣಿಗೆಯಲ್ಲಿ ರಕ್ಷಣಾ ಸಂಶೋಧನಾ ಅಭಿವೃದ್ಧಿ ಸಂಸ್ಥೆಯ ಮುಖ್ಯಸ್ಥ ಜಿ.ಸತೀಶ್ ರೆಡ್ಡಿ ಅವರ ಕಾರ್ಯಾವಧಿಯನ್ನು ಕೇಂದ್ರ ಸರ್ಕಾರ ಇನ್ನೂ 2 ವರ್ಷಗಳ ಕಾಲ ವಿಸ್ತರಿಸಿ ಆದೇಶ ಹೊರಡಿಸಿದೆ.
ವಿಜ್ಞಾನಿ ಜಿ.ಸತೀಶ ರೆಡ್ಡಿ ಅವರಿಗೆ ರಕ್ಷಣಾ ಸಂಶೋಧನಾ ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಮುಖ್ಯಸ್ಥರ ಜವಾಬ್ದಾರಿಯನ್ನು ಎರಡು ವರ್ಷಗಳು ವಿಸ್ತರಿಸಿ ಸೋಮವಾರ ಕೇಂದ್ರ ಸರ್ಕಾರ ಆದೇಶಿಸಿದೆ. ಸಚಿವ ಸಂಪುಟದ ನೇಮಕಾತಿ ಮಂಡಳಿಯು ಸತೀಶ್ ರೆಡ್ಡಿ ಅವರನ್ನು ಡಿಆರ್‌ಡಿಒ ಅಧ್ಯಕ್ಷರು ಹಾಗೂ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯಾಗಿ ಮುಂದಿನ ಎರಡು ವರ್ಷಗಳು ಮುಂದುವರಿಸಲು ಅನುಮೋದನೆ ನೀಡಿದೆ. 2018ರ ಆಗಸ್ಟ್‌ನಲ್ಲಿ ಸತೀಶ್ ರೆಡ್ಡಿ ಅವರನ್ನು ಎರಡು ವರ್ಷಗಳ ಅವಧಿಗೆ ಡಿಆರ್‌ಡಿಒ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು.
ಮೂಲತಃ ಆಂಧ್ರ ಪ್ರದೇಶದವರಾದ ಸತೀಶ್ ರೆಡ್ಡಿ ಅವರು, ಅನಂತಪುರದ ಜವಹರಲಾಲ್ ನೆಹರು ತಾಂತ್ರಿಕ ವಿಶ್ವವಿದ್ಯಾಲಯದಿಂದ (ಜೆಎನ್‌ಟಿಯು) ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್ ಪದವಿ ಪಡೆದಿದ್ದಾರೆ. ಹೈದರಾಬಾದ್ ಜೆಎನ್‌ಟಿಯುದಿಂದ ಎಂ.ಎಸ್ ಮತ್ತು ಪಿಎಚ್.ಡಿ ಪಡೆದಿದ್ದಾರೆ. ವಿಜ್ಞಾನಿ ಡಾ. ಅಬ್ದುಲ್ ಕಲಾಂ ಅವರ ಕನಸಿನ ರಕ್ಷಣಾ ಸಂಶೋಧನಾ ಸಂಸ್ಥೆ ‘ರಿಸರ್ಚ್ ಸೆಂಟರ್ ಇಮಾನತ್’ನಲ್ಲಿ ವಿಜ್ಞಾನಿಯಾಗಿ ವೃತ್ತಿಜೀವನ ಆರಂಭಿಸಿದರು. 2015ರ ಮೇನಲ್ಲಿ ರಕ್ಷಣಾ ಸಚಿವರ ವೈಜ್ಞಾನಿಕ ಸಲಹೆಗಾರರಾಗಿ ನೇಮಕಗೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


