ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಗೆ ಒಕ್ಕರಿಸಿದ ಕೊರೋನಾ ಸೋಂಕು!
ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಅವರಿಗೂ ಕೊರೋನಾ ಸೋಂಕು ಒಕ್ಕರಿಸಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಚಂಡೀಘಡ್: ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಅವರಿಗೂ ಕೊರೋನಾ ಸೋಂಕು ಒಕ್ಕರಿಸಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮಾನ್ಸೂನ್ ಅಧಿವೇಶನಕ್ಕೆ ಕೇವಲ 2 ದಿನ ಇರುವಂತೆಯೇ ಹರ್ಯಾಣ ಸಿಎಂ ಖಟ್ಟರ್ ಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಅವರನ್ನು PGIMER ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಖಟ್ಟರ್ ಅವರು, ನನ್ನ ಕೊರೋನಾ ವರದಿ ಪಾಸಿಟಿವ್ ಬಂದಿದ್ದು, ಕಳೆದ 6 ದಿನಗಳ ಅಂತರದಲ್ಲಿ ನನ್ನನ್ನು ಸಂಪರ್ಕಿಸಿದ್ದವರು ಪರೀಕ್ಷೆಗೆ ಒಳಪಡಿ ಎಂದು ಮನವಿ ಮಾಡಿದ್ದಾರೆ.
6 ದಿನಗಳ ಹಿಂದಷ್ಟೇ ಖಟ್ಟರ್ ಅವರು, ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರ ಸಭೆಗೆ ಹಾಜರಾಗಿದ್ದರು. ಈ ಸಭೆ ಬೆನ್ನಲ್ಲೇ ಶೇಖಾವತ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಇನ್ನು ಹರ್ಯಾಣದಲ್ಲಿ ಸಿಎಂ ಖಟ್ಟರ್ ಮಾತ್ರವಲ್ಲದೇ ಸ್ಪೀಕರ್ ಗುಪ್ತಾ, ಬಿಜೆಪಿ ಶಾಸಕ ಅಸೀಮ್ ಗೋಯೆಲ್ ಮತ್ತು ರಾಮ್ ಕುಮಾರ್ ಅವರೂ ಕೂಡ ಸೋಂಕಿಗೆ ತುತ್ತಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


