ರಾಹುಲ್ ಗಾಂಧಿ ತಪ್ಪು ಮಾಡಿದ್ದಾರೆ..!; ಎಐಸಿಸಿ ಕೆಲವು ನಾಯಕರು ಬಿಜೆಪಿ ಜೊತೆ ಸಖ್ಯ ಹೊಂದಿದ್ದಾರೆ: ಮಾಜಿ ಸಂಸದೆ ರಮ್ಯಾ ಗಂಭೀರ ಆರೋಪ
ರಾಷ್ಟ್ರೀಯ ಕಾಂಗ್ರೆಸ್ ನಾಯಕತ್ವ ವಿಚಾರಕ್ಕೆ ಸಂಬಂಧಿಸಿದಂತೆ ಭುಗಿಲೆದ್ದಿರುವ ವಿವಾದಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಮಂಡ್ಯದ ಮಾಜಿ ಸಂಸದೆ ರಮ್ಯಾ ಪ್ರತಿಕ್ರಿಯೆ ನೀಡಿದ್ದು, ಎಐಸಿಸಿ ಕೆಲವು ನಾಯಕರು ಬಿಜೆಪಿ ಜೊತೆ ಸಖ್ಯ ಹೊಂದಿದ್ದಾರೆ ಎಂದು ಹೇಳಿದ್ದಾರೆ.

ಬೆಂಗಳೂರು: ರಾಷ್ಟ್ರೀಯ ಕಾಂಗ್ರೆಸ್ ನಾಯಕತ್ವ ವಿಚಾರಕ್ಕೆ ಸಂಬಂಧಿಸಿದಂತೆ ಭುಗಿಲೆದ್ದಿರುವ ವಿವಾದಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಮಂಡ್ಯದ ಮಾಜಿ ಸಂಸದೆ ರಮ್ಯಾ ಪ್ರತಿಕ್ರಿಯೆ ನೀಡಿದ್ದು, ಎಐಸಿಸಿ ಕೆಲವು ನಾಯಕರು ಬಿಜೆಪಿ ಜೊತೆ ಸಖ್ಯ ಹೊಂದಿದ್ದಾರೆ ಎಂದು ಹೇಳಿದ್ದಾರೆ.
ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ರಮ್ಯಾ, ಪಕ್ಷದ ನಾಯಕತ್ವದ ಬಗ್ಗೆ ಧ್ವನಿ ಎತ್ತಿರುವ ಹಿರಿಯ ಮುಖಂಡರ ವಿರುದ್ಧ ಕಿಡಿಕಾರಿರುವ ರಮ್ಯಾ ರಾಹುಲ್ ಗಾಂಧಿ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ. 'ಎಐಸಿಸಿಯ ಕೆಲವು ನಾಯಕರು ಬಿಜೆಪಿ ಜೊತೆ ಅಷ್ಟೇ ಅಲ್ಲ ಮಾಧ್ಯಮಗಳ ಜೊತೆಯೂ ಸೇರಿಕೊಂಡಿದ್ದಾರೆ. ರಾಹುಲ್ ಗಾಂಧಿಯವರು ಪಕ್ಷದ ನಾಯಕರು ಕೇವಲ ಬಿಜೆಪಿ ಜೊತೆಗೆ ಸೇರಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ಅವರೆಲ್ಲ ಬಿಜೆಪಿಯ ಜೊತೆ ಅಷ್ಟೇ ಅಲ್ಲದೇ ಮಾಧ್ಯಮಗಳೊಂದಿಗೂ ಸೇರಿ ಕೊಂಡಿದ್ದಾರೆ. ಹೀಗಾಗಿ ಎಐಸಿಸಿ ಕಾರ್ಯಕಾರಿಣಿ ನಡೆಯುತ್ತಿರುವ ಸಂದರ್ಭದಲ್ಲಿಯೇ ಒಳಗಡೆ ನಡೆಯುತ್ತಿರುವ ಚರ್ಚೆ ನೇರವಾಗಿ ಮಾಧ್ಯಮಗಳಲ್ಲಿ ಬಿತ್ತರವಾಗುವಂತೆ ನೋಡಿಕೊಳ್ಳುತ್ತಿದ್ದಾರೆ ಎಂದು ರಮ್ಯಾ ಆರೋಪಿಸಿದ್ದಾರೆ.
ಹಿರಿಯ ಮುಖಂಡರು ಸೋನಿಯಾ ಗಾಂಧಿಗೆ ಬರೆದ ಪತ್ರವನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದುದಷ್ಟೇ ಅಲ್ಲ, ಅವರು ಸಿಡಬ್ಲ್ಯುಸಿ ಸಭೆಯ ಪ್ರತಿಯೊಂದು ಮಾತುಕತೆಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡುವುದನ್ನು ಮುಂದುವರಿಸುತ್ತಾರೆ. ಅದ್ಭುತ!.. ಅಲ್ಲದೆ ರಾಹುಲ್ ಅವರು ತಪ್ಪು ಮಾಡಿದ್ದಾರೆ ಎಂದು ನಾನು ಭಾವಿಸುತ್ತೇನೆ. ಹಿರಿಯ ಮುಖಂಡರು ಬಿಜೆಪಿ ಜೊತೆಗೆ ಮಾತ್ರವಲ್ಲ, ಬಿಜೆಪಿ ಮತ್ತು ಮಾಧ್ಯಮಗಳೊಂದಿಗೆ ಕೈಜೋಡಿಸುವ ಮೂಲಕ ಅವರು ಹೇಳಬೇಕಿತ್ತು ಎಂದು ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


