ಪ್ರಣಬ್ ಮುಖರ್ಜಿ ಆರೋಗ್ಯದಲ್ಲಿ ಯಾವುದೇ ಬದಲಾವಣೆಯಿಲ್ಲ: ಆಸ್ಪತ್ರೆ ಪ್ರಕಟಣೆ
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಯಥಾಸ್ಥಿತಿಯಲ್ಲಿದ್ದು,ಯಾವುದೇ ಚೇತರಿಕೆ ಕಂಡು ಬಂದಿಲ್ಲ ಎಂದು ಆರ್ಮಿ ರಿಸೇರ್ಚ್ ಮತ್ತು ರೆಫೆರಲ್ ಆಸ್ಪತ್ರೆ ತಿಳಿಸಿದೆ.

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಯಥಾಸ್ಥಿತಿಯಲ್ಲಿದ್ದು,ಯಾವುದೇ ಚೇತರಿಕೆ ಕಂಡು ಬಂದಿಲ್ಲ ಎಂದು ಆರ್ಮಿ ರಿಸೇರ್ಚ್ ಮತ್ತು ರೆಫೆರಲ್ ಆಸ್ಪತ್ರೆ ತಿಳಿಸಿದೆ.
ಪ್ರಣಬ್ ಮುಖರ್ಜಿ ಕೋಮಾದಲ್ಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ, 84 ವರ್ಷದ ಪ್ರಣಬ್ ಮುಖರ್ಜಿ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ವೆಂಟಿಲೇಟರ್ ಸಹಾಯದಲ್ಲಿ ಉಸಿರಾಡುತ್ತಿದ್ದರು. ಆಗಸ್ಟ್ 10 ರಂದು ದೆಹಲಿ ಕಂಟೋನ್ಮೆಂಟ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇಂದು ಬೆಳಗ್ಗೆ ಕೂಡ ಮುಖರ್ಜಿ ಅವರ ಆರೋಗ್ಯದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ, ಅವರು ದೀರ್ಘ ಕೋಮಾಗೆ ಜಾರಿದ್ದಾರೆ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ. ಇತ್ತೀಚೆಗೆ ಅವರಿಗೆ ಮಿದುಳು ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ಜತೆಗೆ ಅವರಿಗೆ ಕೊರೋನಾ ಸೋಂಕು ಕೂಡ ತಗುಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


