ಸೆಪ್ಟೆಂಬರ್ 14 ರಿಂದ ಅಕ್ಟೋಬರ್ 1ರವರೆಗೆ ಸಂಸತ್ ಮುಂಗಾರು ಅಧಿವೇಶನ
ಸೆಪ್ಟೆಂಬರ್ 14ರಿಂದ ಅಕ್ಟೋಬರ್ 1ರವರೆಗೆ ಸಂಸತ್ ಮುಂಗಾರು ಅಧಿವೇಶನ ನಡೆಯಲಿದೆ.

ನವದೆಹಲಿ: ಸೆಪ್ಟೆಂಬರ್ 14ರಿಂದ ಅಕ್ಟೋಬರ್ 1ರವರೆಗೆ ಸಂಸತ್ ಮುಂಗಾರು ಅಧಿವೇಶನ ನಡೆಯಲಿದೆ.
ಸಂಸದೀಯ ವ್ಯವಹಾರಗಳ ಮೇಲಿನ ಸಂಪುಟ ಸಮಿತಿ ಸಭೆ ಎರಡುವಾರಗಳ ಅಧಿವೇಶನ ನಡೆಸಲು ದಿನಾಂಕ ನಿಗದಿಪಡಿಸಿದೆ. ಸೆಪ್ಟೆಂಬರ್ 14ರಿಂದ ಅಕ್ಟೋಬರ್ 1ರವರೆಗೆ ಸಂಸತ್ ಮುಂಗಾರು ಅಧಿವೇಶನ ನಡೆಯಲಿದ್ದು, ಅಧಿವೇಶನ ಆರಂಭವಾದ ಬಳಿಕ ಮಧ್ಯದಲ್ಲಿ ಯಾವುದೇ ರಜೆ ಇರುವುದಿಲ್ಲ, ಪ್ರತಿನಿತ್ಯ 4 ಗಂಟೆಗಳ ಕಾಲ ಅಧಿವೇಶನ ನಡೆಯಲಿದೆ.
ಕೊರೊನಾ ಹಿನ್ನಲೆಯಲ್ಲಿ ಜನರ ಜೀವನ ಶೈಲಿಯೇ ಬದಲಾಗಿದೆ. ಜೊತೆಗೆ ಸರ್ಕಾರದ ಯಂತ್ರದ ಶೈಲಿ ಕೂಡ. ಇದೇ ರೀತಿ ಈಗ ಇದೇ ಮೊದಲ ಬಾರಿಗೆ ಸಂಸತ್ ಅಧಿವೇಶನವೂ ಭಿನ್ನವಾಗಿ ನಡೆಯಲಿದೆ. ಕೊರೊನಾ ಕಾರಣಕ್ಕೆ ಈ ಬಾರಿಯ ಸಂಸತ್ತಿನ ಮುಂಗಾರು ಅಧಿವೇಶನವನ್ನು ಹೇಗೆ ನಡೆಸಬೇಕೆಂಬ ಗೊಂದಲ ಉಂಟಾಗಿತ್ತು.ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ದೃಷ್ಟಿಯಿಂದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರಿಗೆ ಆಸನದ ವ್ಯವಸ್ಥೆಯೂ ಭಿನ್ನವಾಗಿರಲಿದೆ. 542 ಲೋಕಸಭಾ ಸದಸ್ಯರ ಪೈಕಿ ಕೆಲವರಿಗೆ ಲೋಕಸಭೆಯಲ್ಲಿ, ಕೆಲವರಿಗೆ ರಾಜ್ಯಸಭೆಯಲ್ಲಿ ಮತ್ತೆ ಕೆಲವರಿಗೆ ಸೆಂಟ್ರಲ್ ಹಾಲ್ ನಲ್ಲಿ ಆಸನದ ವ್ಯವಸ್ಥೆ ಮಾಡಲಾಗುತ್ತದೆ.
ರಾಜ್ಯಸಭೆಯಲ್ಲಿ 7 ಪತ್ರಕರ್ತರಿಗೆ ಮಾತ್ರ ಅವಕಾಶ ನೀಡಲಾಗಿದೆ.ಲೋಕಸಭೆಯಲ್ಲಿ 15 ಪತ್ರಕರ್ತರಿಗೆ ಅವಕಾಶ ನೀಡಲಾಗುವುದು ಎಂದೂ ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


