ದೇಶ

ದೇಶದಲ್ಲಿ 3.5 ಕೋಟಿ ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ: ಕೇಂದ್ರ ಸಚಿವಾಲಯ ಮಾಹಿತಿ

ಟೆಸ್ಟ್ ಟ್ರ್ಯಾಕ್ ಟ್ವೀಟ್ ತಂತ್ರದ ಅಡಿಯಲ್ಲಿ ಈ ವರೆಗೂ ದೇಶದಲ್ಲಿ 3.5 ಕೋಟಿ ಜನರಿಗೆ ಕೋವಿಡ್-19 ಪರೀಕ್ಷೆ ನಡೆಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ.

ದೇಶದಲ್ಲಿ 3.5 ಕೋಟಿ ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ: ಕೇಂದ್ರ ಸಚಿವಾಲಯ ಮಾಹಿತಿ
ಸಂಗ್ರಹ ಚಿತ್ರ
Published On :

ನವದೆಹಲಿ: ಟೆಸ್ಟ್ ಟ್ರ್ಯಾಕ್ ಟ್ವೀಟ್ ತಂತ್ರದ ಅಡಿಯಲ್ಲಿ ಈ ವರೆಗೂ ದೇಶದಲ್ಲಿ 3.5 ಕೋಟಿ ಜನರಿಗೆ ಕೋವಿಡ್-19 ಪರೀಕ್ಷೆ ನಡೆಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ. 

ಕೇಂದ್ರ ಸಚಿವಾಲ ಮಾಹಿತಿ ನೀಡಿರುವ ಪ್ರಕಾರ ಈ ವರೆಗೂ ಅಂದರೆ ಆಗಸ್ಟ್ 24 ರವರೆಗೂ 3,68,27,520 ಸ್ಯಾಂಪಲ್ ಪರೀಕ್ಷೆ ನಡೆಸಲಾಗಿದೆ. ಕಳೆದ 24 ಗಂಟೆಗಳಲ್ಲಿ 9,25,383 ಮಾದರಿಗಳನ್ನು ಪರೀಕ್ಷೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ. 

ಇನ್ನು ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 60,975 ಮಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, ಇನ್ನು ನಿನ್ನೆ ಒಂದೇ ದಿನ 848 ಮಂದಿ ಮಹಾಮಾರಿ ವೈರಸ್'ಗೆ ಬಲಿಯಾಗಿದ್ದಾರೆ ಇದರೊಂದಿಗೆ ದೇಶದಲ್ಲಿ ಈ ವರೆಗೂ ಸಾವನ್ನಪ್ಪಿದವರ ಸಂಖ್ಯೆ 58,390ಕ್ಕೆ ತಲುಪಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.