ದೇಶ

ತನ್ನ ಹೆಸರಿನಲ್ಲಿ 10 ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿದವರ ವಿರುದ್ಧ ಕೇಸ್ ದಾಖಲಿಸಿದ ಐಎಎಸ್ ಅಧಿಕಾರಿ ಟೀನಾ

ಐಎಎಸ್ ಅಧಿಕಾರಿ ಟೀನಾ ದಾಬಿ ಅವರು ತನ್ನ ಹೆಸರಿನಲ್ಲಿ 10 ನಕಲಿ ಫೇಸ್‌ಬುಕ್ ಖಾತೆಗಳನ್ನು ನಿರ್ವಹಿಸುತ್ತಿದ್ದ ಅಪರಿಚಿತ ವ್ಯಕ್ತಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

ತನ್ನ ಹೆಸರಿನಲ್ಲಿ 10 ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿದವರ ವಿರುದ್ಧ ಕೇಸ್ ದಾಖಲಿಸಿದ ಐಎಎಸ್ ಅಧಿಕಾರಿ ಟೀನಾ
ಟೀನಾ
Published On :

ಬಿಕಾನೇರ್: ಐಎಎಸ್ ಅಧಿಕಾರಿ ಟೀನಾ ದಾಬಿ ಅವರು ತನ್ನ ಹೆಸರಿನಲ್ಲಿ 10 ನಕಲಿ ಫೇಸ್‌ಬುಕ್ ಖಾತೆಗಳನ್ನು ನಿರ್ವಹಿಸುತ್ತಿದ್ದ ಅಪರಿಚಿತ ವ್ಯಕ್ತಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

ಐಎಎಸ್ ಅಧಿಕಾರಿ ದೂರಿನ ಆಧಾರದ ಮೇಲೆ ರಾಜಸ್ಥಾನದ ಗಂಗಾನಗರ ಜಿಲ್ಲೆಯ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ(ಐಪಿಸಿ)ಯ ಸೆಕ್ಷನ್ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

2016 ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವ ಟೀನಾ ದಾಬಿ ಅವರು ಪ್ರಸ್ತುತ ಗಂಗಾನಗರ ಜಿಲ್ಲಾ ಪರಿಷತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಟೀನಾ ದಾಬಿ ಅವರು 2016 ರ ಯುಪಿಎಸ್ ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.