ಕೇರಳದಲ್ಲಿ ದಾಖಲೆ ಬರೆದ ಕೊರೋನಾ ಸೋಂಕು, ಒಂದೇ ದಿನ 2476 ಹೊಸ ಸೋಂಕು ಪ್ರಕರಣಗಳು ದಾಖಲು!
ಮಾರಕ ಕೊರೋನಾ ಸೋಂಕು ಕೇರಳದಲ್ಲಿ ಸಂಪೂರ್ಣ ನಿಯಂತ್ರಣದಲ್ಲಿದೆ ಎನ್ನುವಾಗಲೇ ಮತ್ತೆ ಸೋಂಕು ತನ್ನ ಆರ್ಭಟ ಮುಂದುವರೆಸಿದ್ದು, ಇಂದು ಹೊಸ ಸೋಂಕಿತರ ಸಂಖ್ಯೆಯಲ್ಲಿ ದಾಖಲೆ ಬರೆದಿದೆ.

ಕೊಚ್ಚಿ: ಮಾರಕ ಕೊರೋನಾ ಸೋಂಕು ಕೇರಳದಲ್ಲಿ ಸಂಪೂರ್ಣ ನಿಯಂತ್ರಣದಲ್ಲಿದೆ ಎನ್ನುವಾಗಲೇ ಮತ್ತೆ ಸೋಂಕು ತನ್ನ ಆರ್ಭಟ ಮುಂದುವರೆಸಿದ್ದು, ಇಂದು ಹೊಸ ಸೋಂಕಿತರ ಸಂಖ್ಯೆಯಲ್ಲಿ ದಾಖಲೆ ಬರೆದಿದೆ.
ಹೌದು.. ಕೇರಳದಲ್ಲಿ ಇಂದು ಒಂದೇ ದಿನ 2476 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಇದು ಕೇರಳದಲ್ಲಿ ದಾಖಲಾದ ಈವರೆಗಿನ ಒಂದು ದಿನದ ಗರಿಷ್ಟ ಸೋಂಕು ಪ್ರಕರಣಗಳಾಗಿವೆ. ಆ ಮೂಲಕ ಕೇರಳದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 66,831ಕ್ಕೆ ಏರಿಕೆಯಾಗಿದೆ. ಈ ಪೈಕಿ ಕಳೆದ 24 ಗಂಟೆಗಳಲ್ಲಿ 1351 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಕೇರಳದಲ್ಲಿ ಗುಣಮುಖರಾದ ಒಟ್ಟಾರೆ ಸೋಂಕಿತರ ಸಂಖ್ಯೆ 41, 694ಕ್ಕೆ ಏರಿಕೆಯಾಗಿದೆ.
ಅಂತೆಯೇ ಕೇರಳದಲ್ಲಿ ಪ್ರಸ್ತುತ 22, 344 ಸಕ್ರಿಯ ಪ್ರಕರಣಗಳಿವೆ. ಅಂತೆಯೇ ಕಳೆದ 24 ಗಂಟೆಗಳಲ್ಲಿ ಕೇರಳದಲ್ಲಿ ಒಟ್ಟು 13 ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೇರಳದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 270ಕ್ಕೆ ಏರಿಕೆಯಾಗಿದೆ.
ಇನ್ನು ಇಂದು ಪತ್ತೆಯಾದ ಒಟ್ಟು 2476 ಹೊಸ ಸೋಂಕು ಪ್ರಕರಣಗಳ ಪೈಕಿ 2243 ಪ್ರಕರಣಗಳು ಸೋಂಕಿತರ ಸಂಪರ್ಕಕ್ಕೆ ಬಂದವರು ಎಂದು ಕೇರಳ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


