ದೆಹಲಿಯಲ್ಲಿ ಕೊರೋನಾದಿಂದ ಗುಣಮುಖ ಹೊಂದುತ್ತಿರುವವರ ಸಂಖ್ಯೆ ಶೇ.90ಕ್ಕಿಂತ ಅಧಿಕ, ಪರೀಕ್ಷೆ ಹೆಚ್ಚಳ
ರಾಜಧಾನಿ ದೆಹಲಿಯಲ್ಲಿ ಕಳೆದ ಕೆಲ ದಿನಗಳಿಂದ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿದ್ದು ಗುಣಮುಖ ಹೊಂದುತ್ತಿರುವವರ ಸಂಖ್ಯೆ ಕೂಡ ಶೇಕಡಾ 90ಕ್ಕಿಂತ ಹೆಚ್ಚಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಕಳೆದ ಕೆಲ ದಿನಗಳಿಂದ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿದ್ದು ಗುಣಮುಖ ಹೊಂದುತ್ತಿರುವವರ ಸಂಖ್ಯೆ ಕೂಡ ಶೇಕಡಾ 90ಕ್ಕಿಂತ ಹೆಚ್ಚಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ದೆಹಲಿಯಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳ ಬಗ್ಗೆ ಚರ್ಚೆ ನಡೆಸಲು ಇಂದು ಕೇಜ್ರಿವಾಲ್ ಸಭೆ ಕರೆದಿದ್ದರು ಅದರಲ್ಲಿ ಸಚಿವರುಗಳು ಮತ್ತು ಇತರ ಕೆಲವು ಅಧಿಕಾರಿಗಳು ಭಾಗಿಯಾಗಿದ್ದರು. ಮುಂದಿನ ದಿನಗಳಲ್ಲಿ ಕೋವಿಡ್-19 ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಸಲು ಆದೇಶ ನೀಡುವಂತೆ ಮತ್ತು ಕಾನೂನು ಪಾಲನೆಯಾಗುತ್ತಿದೆಯೇ ಎಂದು ನೋಡಿಕೊಳ್ಳುವಂತೆ ಕೇಜ್ರಿವಾಲ್ ಆದೇಶ ಹೊರಡಿಸಿದರು.
ಪ್ರತಿಯೊಬ್ಬರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಮಾಸ್ಕ್ ಗಳನ್ನು ಧರಿಸಬೇಕು, ಜನರ ಅತಿಯಾದ ಆತ್ಮವಿಶ್ವಾಸದಿಂದ ಹಲವರು ಕೊರೋನಾ ಸೋಂಕಿನ ಲಕ್ಷಣ ಕಂಡುಬಂದರೂ ಕೂಡ ಪರೀಕ್ಷೆ ಮಾಡಿಸಿಕೊಳ್ಳುವುದಿಲ್ಲ, ಇದರಿಂದ ವೈರಸ್ ಜಾಸ್ತಿಯಾಗುತ್ತಿದೆ ಎಂದು ಹೇಳಿದರು.
ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 1,693 ಹೊಸ ಪ್ರಕರಣಗಳು ವರದಿಯಾಗಿದ್ದು ಒಟ್ಟು 14 ಸಾವಿರದ 130 ಬೆಡ್ ಗಳಿವೆ, ಅವುಗಳಲ್ಲಿ 10,448 ಬೆಡ್ ಗಳು ಖಾಲಿಯಿವೆ. ಕೋವಿಡ್ ಪರೀಕ್ಷೆಗಳನ್ನು ಸರ್ಕಾರ ಹೆಚ್ಚಿಸಲಿದೆ. ಮುಂದಿನ ವಾರ 40 ಸಾವಿರ ಪರೀಕ್ಷೆಗಳನ್ನು ಪ್ರತಿದಿನ ನಡೆಸಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


