ಕೋವಿಡ್ ಲಸಿಕೆ ತಯಾರಿಕೆಗೆ ಸರ್ಕಾರದಿಂದ ಯಾವುದೇ ಸೂಚನೆಯಿಲ್ಲ: ರಾಹುಲ್ ಗಾಂಧಿ ವಾಗ್ದಾಳಿ
ಕೋವಿಡ್ ಸೋಂಕು ನಿಯಂತ್ರಿಸಲು ಲಸಿಕೆ ರೂಪಿಸುವಲ್ಲಿ ವಿಫಲವಾದ ಕಾರಣ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುರುವಾರ ಕೇಂದ್ರದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿ: ಕೋವಿಡ್ ಸೋಂಕು ನಿಯಂತ್ರಿಸಲು ಲಸಿಕೆ ರೂಪಿಸುವಲ್ಲಿ ವಿಫಲವಾದ ಕಾರಣ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುರುವಾರ ಕೇಂದ್ರದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ವಿಷಯದಲ್ಲಿ ಸರ್ಕಾರದ ಪೂರ್ವಸಿದ್ಧತೆ ಆತಂಕಕಾರಿ ಎಂದು ರಾಹುಲ್ ಟ್ವೀಟ್ ನಲ್ಲಿ ತಿಳಿಸಿದ್ದಾರೆ. ದೇಶದಲ್ಲಿ ಕೋವಿಡ್ ಸೋಂಕು ಕಡಿಮೆಗೊಳಿಸಲು ಈ ವೇಳೆಗಾಗಲೇ ಲಸಿಕೆ ಲಭ್ಯವಿರಬೇಕಿತ್ತು. ಆದರೆ ಅದರ ಯಾವುದೇ ಲಕ್ಷಣಗಳು ಇನ್ನೂ ಇಲ್ಲ. ಈ ಸಂಬಂಧ ಭಾರತ ಸರ್ಕಾರದ ಪೂರ್ವಸಿದ್ಧತೆ ಆತಂಕಕಾರಿ ಎಂದು ಹೇಳಿದ್ದಾರೆ.
ದೇಶದ ಜನತೆಯನ್ನು ಕೊರೋನಾದಿಂದ ರಕ್ಷಿಸಲು ನ್ಯಾಯಯುತ ಲಸಿಕೆ ತಂತ್ರವು ಈಗ ಜಾರಿಯಲ್ಲಿರಬೇಕು. ಆದರೆ ಅದರ ಯಾವುದೇ ಲಕ್ಷಣಗಳು ಇನ್ನೂ ಗೋಚರಿಸುತ್ತಿಲ್ಲ, ಸರ್ಕಾರ ಜನರಿಗೆ ಕೈಗೆಟುಕುವ ದರದಲ್ಲಿ ಲಸಿಕೆ ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


