ಎಸ್ಸಿ / ಎಸ್‌ಟಿಗಳ ಉಪ-ವರ್ಗೀಕರಣ ಕುರಿತ 2004ರ ತೀರ್ಪು ಮರುಪರಿಶೀಲನೆ ಅಗತ್ಯ: ಸುಪ್ರೀಂ ಕೋರ್ಟ್
2004ರ ತೀರ್ಪಿನ ಪ್ರಕಾರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಉದ್ಯೋಗಗಳಲ್ಲಿ ಹಗೂ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶಕ್ಕಾಗಿ ಮೀಸಲಾತಿ ನೀಡಲು ಪಂಗಡವನ್ನು ಮತ್ತಷ್ಟು ಉಪ ವರ್ಗೀಕರಣಕ್ಕೆ ಒಳಪಡಿಸುವ ಅಧಿಕಾರ ರಾಜ್ಯಗಳಿಗೆ ಇಲ್ಲಎಂಬ ತನ್ನ ತೀರ್ಪನ್ನು ಮರುಪರಿಶೀಲಿಸುವ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.

ನವದೆಹಲಿ: 2004ರ ತೀರ್ಪಿನ ಪ್ರಕಾರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಉದ್ಯೋಗಗಳಲ್ಲಿ ಹಗೂ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶಕ್ಕಾಗಿ ಮೀಸಲಾತಿ ನೀಡಲು ಪಂಗಡವನ್ನು ಮತ್ತಷ್ಟು ಉಪ ವರ್ಗೀಕರಣಕ್ಕೆ ಒಳಪಡಿಸುವ ಅಧಿಕಾರ ರಾಜ್ಯಗಳಿಗೆ ಇಲ್ಲಎಂಬ ತನ್ನ ತೀರ್ಪನ್ನು ಮರುಪರಿಶೀಲಿಸುವ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.
ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ಐದು ನ್ಯಾಯಾಧೀಶರ ಪೀಠವುಇ ವಿ ಚಿನ್ನಯ್ಯ ಪ್ರಕರಣದಲ್ಲಿ ಸಂವಿಧಾನ ಪೀಠದ 2004 ರ ತೀರ್ಪನ್ನು ಮರುಪರಿಶೀಲಿಸುವ ಅಗತ್ಯವಿದೆ ಮತ್ತು ಆದ್ದರಿಂದ ಸೂಕ್ತ ನಿರ್ದೇಶನಕ್ಕಾಗಿ ಈ ವಿಷಯವನ್ನು ಭಾರತದ ಮುಖ್ಯ ನ್ಯಾಯಾಧೀಶರ ಮುಂದೆ ಇಡಬೇಕು ಎಂದು ಅಭಿಪ್ರಾಯಪಟ್ಟಿದೆ.
ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ, ವಿನೀತ್ ಸರನ್, ಎಂ ಆರ್ ಶಾ ಮತ್ತು ಅನಿರುದ್ಧ ಬೋಸ್ ಅವರನ್ನೂ ಒಳಗೊಂಡ ನ್ಯಾಯಪೀಠ, 2004 ರ ತೀರ್ಪು ಸರಿಯಾಗಿ ನಿರ್ಧಾರವಾಗಿಲ್ಲ. ಎಸ್‌ಸಿ / ಎಸ್‌ಟಿಗಳಲ್ಲಿ ಜಾತಿಯನ್ನು ಉಪವರ್ಗೀಕರಣಗೊಳಿಸುವ ಮೂಲಕ ರಾಜ್ಯಗಳು ಆದ್ಯತೆಯ ಮೀಸಲು ನೀಡಲು ಕಾನೂನುಗಳನ್ನು ಮಾಡಬಹುದು ಎಂದು ಹೇಳಿದೆ. ಹಿಂದಿನ ತೀರ್ಪನ್ನು ಮರುಪರಿಶೀಲಿಸಲು ವಿಸ್ಕೃತ ನ್ಯಾಯಪೀಠವನ್ನು ಸ್ಥಾಪಿಸಲು ಸಿಜೆಐ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ಅವರ ಮುಂದೆ ಹೈಕೋರ್ಟ್ ಆದೇಶದ ವಿರುದ್ಧ ಪಂಜಾಬ್ ಸರ್ಕಾರ ಸಲ್ಲಿಸಿದ್ದ ಪ್ರಕರಣವನ್ನು ನ್ಯಾಯಪೀಠ ಉಲ್ಲೇಖಿಸಿತು.
ಮೀಸಲಾತಿಯ ಅನುದಾನಕ್ಕಾಗಿ ಎಸ್‌ಸಿ / ಎಸ್‌ಟಿ ವರ್ಗದವ್ರನ್ನು ಜಾತಿವಾರು ಉಪ ವರ್ಗೀಕರಣಗೊಳಿಸಲು ಸರ್ಕಾರಕ್ಕೆ ಅಧಿಕಾರ ನೀಡುವ ರಾಜ್ಯದ ಕಾನೂನನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ತಿರಸ್ಕರಿಸಿದೆ. ಹೈಕೋರ್ಟ್ 2004 ರ ಸುಪ್ರೀಂ ಕೋರ್ಟ್ ತೀರ್ಪನ್ನು ಅನುಸರಿಸಿ ಎಸ್ಸಿ / ಎಸ್ಟಿ ಉಪ ವರ್ಗೀಕರಣ ಕ್ರಮವನ್ನು ಕೈಗೊಳ್ಳಲು ಪಂಜಾಬ್ ಸರ್ಕಾರಕ್ಕೆ ಅಧಿಕಾರವಿಲ್ಲ ಎಂದು ಅಭಿಪ್ರಾಯಪಟ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


