ದೇಶ

ನೀಟ್, ಜೆ ಇಇ ಪರೀಕ್ಷೆ ಮೂಂದೂಡಲು ಸುಪ್ರೀಂಗೆ 6 ರಾಜ್ಯಗಳ ಮನವಿ

ನೀಟ್, ಜೆ ಇಇ ಪರೀಕ್ಷೆ ಆಯೋಜನೆ ಕುರಿತ ಕೇಂದ್ರ ಸರ್ಕಾರ ಹಠಮಾರಿ ಧೋರಣೆ ವಿರುದ್ಧ ಬಿಜೆಪಿಯೇತರ ರಾಜ್ಯಗಳು ತಿರುಗಿಬಿದ್ದಿದ್ದು, ಪರೀಕ್ಷೆ ಮೂಂದೂಡುವಂತೆ ಸುಪ್ರೀಂ ಕೋರ್ಟ್ 6 ರಾಜ್ಯ ಸರ್ಕಾರಗಳು ಅರ್ಜಿ ಸಲ್ಲಿಸಿವೆ.

ನೀಟ್, ಜೆ ಇಇ ಪರೀಕ್ಷೆ ಮೂಂದೂಡಲು ಸುಪ್ರೀಂಗೆ 6 ರಾಜ್ಯಗಳ ಮನವಿ
ಪರೀಕ್ಷೆ ಮುಂದೂಡುವಂತೆ ಪ್ರತಿಭಟನೆ
Published On :

ನವದೆಹಲಿ: ನೀಟ್, ಜೆ ಇಇ ಪರೀಕ್ಷೆ ಆಯೋಜನೆ ಕುರಿತ ಕೇಂದ್ರ ಸರ್ಕಾರ ಹಠಮಾರಿ ಧೋರಣೆ ವಿರುದ್ಧ ಬಿಜೆಪಿಯೇತರ ರಾಜ್ಯಗಳು ತಿರುಗಿಬಿದ್ದಿದ್ದು, ಪರೀಕ್ಷೆ ಮೂಂದೂಡುವಂತೆ ಸುಪ್ರೀಂ ಕೋರ್ಟ್ 6 ರಾಜ್ಯ ಸರ್ಕಾರಗಳು ಅರ್ಜಿ ಸಲ್ಲಿಸಿವೆ.

ಕೊರೊನಾ ಸೋಂಕು ಹರಡುವಿಕೆ, ಮತ್ತು ಕೆಲವು ರಾಜ್ಯಗಳಲ್ಲಿ ಪ್ರವಾಹ ಭೀತಿ, ತೊಂದರೆಯ ಕಾರಣ 2020ನೇ ಸಾಲಿನ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಮತ್ತು ಜಂಟಿ ಪ್ರವೇಶ ಪರೀಕ್ಷೆ (ಜೆ ಇಇ) ನಡೆಸಲು ಮುಂದಾಗಿರುವ ಕೇಂದ್ರದ ವಿರುದ್ಧ 6 ಆರು ರಾಜ್ಯಗಳು ಸುಪ್ರೀಂಕೋರ್ಟ್ ಮೊರೆ  ಹೋಗಿವೆ.

ಸಪ್ಟೆಂಬರ್ ತಿಂಗಳಿನಲ್ಲೇ ಇಂಜಿನಿಯರಿಂಗ್ ಮತ್ತು ಮೆಡಿಕಲ್ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ ನಡೆಸಬಾರದು. ಬದಲಿಗೆ ಈ ದಿನಾಂಕ ಮುಂದೂಡುವಂತೆ ಸರ್ವೋಚ್ಛ ನ್ಯಾಯಾಲಯಕ್ಕೆ ಮರುಪರಿಶೀಲನಾ ಅರ್ಜಿ ಸಲ್ಲಿಸಲಾಗಿದೆ. ಬಿಜೆಪಿ ಸರ್ಕಾರೇತರ ರಾಜ್ಯಗಳಾದ ಪಶ್ಚಿಮ ಬಂಗಾಳ, ರಾಜಸ್ಥಾನ, ಪಂಜಾಬ್,  ಮಹಾರಾಷ್ಟ್ರ, ಛತ್ತೀಸ್ ಗಢ ಮತ್ತು ಜಾರ್ಖಂಡ್ ರಾಜ್ಯಗಳು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿವೆ.

ಇದರ ಜೊತೆಗೆ ದೇಶಾದ್ಯಂತ ಹಲವೆಡೆ ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ವಿರೋಧಿಸಿ ಕಾಂಗ್ರೆಸ್ ಮತ್ತು ಭಾರತದ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.