ಬೆಂಗಳೂರಿನಲ್ಲೇ ಮುಂದಿನ ಏರ್ ಶೋ, 'ಏರೋ ಇಂಡಿಯಾ 2021' ದಿನಾಂಕ ಪ್ರಕಟ
ಏರೋ ಇಂಡಿಯಾ ಮುಂದಿನ ಆವೃತ್ತಿಯ ಸಂಬಂಧ ರಕ್ಷಣಾ ಸಚಿವಾಲಯವು ತಾತ್ವಿಕ ನಿರ್ಧಾರವನ್ನು ತೆಗೆದುಕೊಂಡಿದ್ದು ಏಷ್ಯಾದ ಅತಿದೊಡ್ಡ ಏರೋ ಪ್ರದರ್ಶನವಾಗಿರುವ ಏರೋ ಇಂಡಿಯಾ ತನ್ನ ಪಾರಂಪರಿಕ ತಾಣವಾಗಿರುವ ಬೆಂಗಳೂರಿನಲ್ಲಿ ಮುಂದಿನ ವರ್ಷ ಫೆಬ್ರವರಿ 3ರಿಂದ 5ರನಡುವೆ ನಡೆಯಲಿದೆ ಎಂದು ಅಧಿಕೃತ ಮೂಲಗಳು ಹೇಳಿದೆ.

ನವದೆಹಲಿ: ಏರೋ ಇಂಡಿಯಾ ಮುಂದಿನ ಆವೃತ್ತಿಯ ಸಂಬಂಧ ರಕ್ಷಣಾ ಸಚಿವಾಲಯವು ತಾತ್ವಿಕ ನಿರ್ಧಾರವನ್ನು ತೆಗೆದುಕೊಂಡಿದ್ದು ಏಷ್ಯಾದ ಅತಿದೊಡ್ಡ ಏರೋ ಪ್ರದರ್ಶನವಾಗಿರುವ ಏರೋ ಇಂಡಿಯಾ ತನ್ನ ಪಾರಂಪರಿಕ ತಾಣವಾಗಿರುವ ಬೆಂಗಳೂರಿನಲ್ಲಿ ಮುಂದಿನ ವರ್ಷ ಫೆಬ್ರವರಿ 3ರಿಂದ 5ರನಡುವೆ ನಡೆಯಲಿದೆ ಎಂದು ಅಧಿಕೃತ ಮೂಲಗಳು ಹೇಳಿದೆ.
ದೇಶೀಯ ರಕ್ಷಣಾ ಉದ್ಯಮ ಮತ್ತು ಜಾಗತಿಕ ವೈಮಾನಿಕ ಸಂಸ್ಥೆಗಳ ಒತ್ತಾಸೆಯ ಮೇರೆಗೆ ಎರಡು ವರ್ಷಗಳಿಗೊಮ್ಮೆ ನಡೆಯುವ ಈ ವೈಮಾನಿಕ ಪ್ರದರ್ಶನ ನಡೆಸಲು ಸಚಿವಾಲಯ ನಿರ್ಧಾರ ಕೈಗೊಂಡಿದೆ ಎಂದು ಮೂಲಗಳು ವಿವರಿಸಿದೆ.
ಬೃಹತ್ ಕಾರ್ಯಕ್ರಮವನ್ನು ಆಯೋಜಿಸುವ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈಗಾಗಲೇ ಹಲವಾರು ಆಂತರಿಕ ಸಭೆಗಳನ್ನು ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. "ಕೊರೋನಾವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಗರಿಷ್ಠ ಮುನ್ನೆಚ್ಚರಿಕೆ ವಹಿಸುವುದರೊಡನೆ ಕಾರ್ಯಕ್ರಮವನ್ನು ಆಯೋಜಿಸುವುದಾಗಿ ನಿರ್ಧರಿಸಲಾಗಿದೆ."
1996 ರಲ್ಲಿ ಮೊದಲ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಪ್ರಾರಂಭವಾದಾಗಿನಿಂದ ಬೆಂಗಳೂರಿನಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ.
ಹಲವಾರು ದೇಶಗಳ ಅಧಿಕೃತ ನಿಯೋಗಗಳಲ್ಲದೆ ಗಮನಾರ್ಹ ಸಂಖ್ಯೆಯ ಜಾಗತಿಕ ರಕ್ಷಣಾ ಉತ್ಪಾದಕ ಸಂಸ್ಥೆಗಳು ದೊಡ್ಡ ಹೂಡಿಕೆದಾರರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


