ಎನ್ಇಇಟಿ, ಜೆಇಇ ಪರೀಕ್ಷೆಗಳು: ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ, ವಸತಿ ವ್ಯವಸ್ಥೆ ಕಲ್ಪಿಸಲಿರುವ ಒಡಿಶಾ ಸರ್ಕಾರ
ಎನ್ಇಇಟಿ-ಜೆಇಇ ಪರೀಕ್ಷೆಗಳನ್ನು ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆ ಹಾಗೂ ವಸತಿ ವ್ಯವಸ್ಥೆಯನ್ನು ಕಲ್ಪಿಸುವುದಾಗಿ ಒಡಿಶಾ ಸರ್ಕಾರ ಘೋಷಿಸಿದೆ.

ಎನ್ಇಇಟಿ-ಜೆಇಇ ಪರೀಕ್ಷೆಗಳನ್ನು ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆ ಹಾಗೂ ವಸತಿ ವ್ಯವಸ್ಥೆಯನ್ನು ಕಲ್ಪಿಸುವುದಾಗಿ ಒಡಿಶಾ ಸರ್ಕಾರ ಘೋಷಿಸಿದೆ.
ಒಡಿಶಾ ಮುಖ್ಯಕಾರ್ಯದರ್ಶಿ ಅಸಿತ್ ತ್ರಿಪಾಠಿ ಸರ್ಕಾರದ ಪರವಾಗಿ ಈ ಆದೇಶ ಹೊರಡಿಸಿದ್ದು, ಸವಲತ್ತು ಹೊಂದಿರದ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಾರಿಗೆ ವ್ಯವಸ್ಥೆ ಹಾಗೂ ವಸತಿ ವ್ಯವಸ್ಥೆಯನ್ನು ಕಲ್ಪಿಸುವುದಾಗಿ ಹೇಳಿದ್ದಾರೆ.
ಕೋವಿಡ್-19 ಲಾಕ್ ಡೌನ್ ನಿಂದಾಗಿ ಸಂಚರಿಸುವುದಕ್ಕೆ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳ ಪೋಷಕರಿಗೆ ಯಾವುದೇ ಅನನುಕೂಲವಾಗದಂತೆ ಎಚ್ಚರ ವಹಿಸಲಾಗುವುದು ಎಂದು ತ್ರಿಪಾಠಿ ಭರವಸೆ ನೀಡಿದ್ದಾರೆ.
ವಿದ್ಯಾರ್ಥಿಗಳು ತಮ್ಮ ಪ್ರದೇಶದಲ್ಲಿರುವ ಐಟೈ ನೋಡಲ್ ಪ್ರಾಂಶುಪಾಲರನ್ನು ಉಚಿತ ಸಾರಿಗೆ, ವಸತಿ ವ್ಯವಸ್ಥೆಗೆ ಆ.31 ರೊಳಗಾಗಿ ಸಂಪರ್ಕಿಸಬಹುದಾಗಿದೆ. ಸೆ.1-6 ಹಾಗೂ ಸೆ.13 ವರೆಗೆ ಅನುಕ್ರಮವಾಗಿ ಜೆಇಇ ಮುಖ್ಯಪರೀಕ್ಷೆ ಹಾಗೂ ಎನ್ಇಇಟಿ ಪರೀಕ್ಷೆಗಳು ನಿಗದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


