ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ: ನಟಿ ರಿಯಾ ಚಕ್ರವರ್ತಿಗೆ ರಕ್ಷಣೆ ಒದಗಿಸಿ - ಮುಂಬೈ ಪೊಲೀಸರಿಗೆ ಸಿಬಿಐ!
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ ಸಂಬಂಧ ಸತತ ಎರಡು ದಿನಗಳ ಕಾಲ ಸಿಬಿಐ ನಟಿ ರಿಯಾ ಚಕ್ರವರ್ತಿ ಅವರನ್ನು ಸತತ ಎರಡು ದಿನಗಳ ಕಾಲ ವಿಚಾರಣೆ ನಡೆಸಿದ್ದಾರೆ.

ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ ಸಂಬಂಧ ಸತತ ಎರಡು ದಿನಗಳ ಕಾಲ ಸಿಬಿಐ ನಟಿ ರಿಯಾ ಚಕ್ರವರ್ತಿ ಅವರನ್ನು ಸತತ ಎರಡು ದಿನಗಳ ಕಾಲ ವಿಚಾರಣೆ ನಡೆಸಿದ್ದಾರೆ.
ವಿಚಾರಣೆ ವೇಳೆ ತನಗೂ ತನ್ನ ಕುಟುಂಬದ ಜೀವಕ್ಕೂ ಬೆದರಿಕೆ ಇದೆ ಎಂದು ರಿಯಾ ಚಕ್ರವರ್ತಿ ಹೇಳಿಕೊಂಡಿದ್ದರಿಂದ ಅವರಿಗೆ ರಕ್ಷಣೆ ನೀಡುವಂತೆ ಒತ್ತಾಯಿಸಿ ಕೇಂದ್ರ ತನಿಖಾ ದಳ (ಸಿಬಿಐ) ಶನಿವಾರ ಮುಂಬೈ ಪೊಲೀಸರಿಗೆ ಪತ್ರ ಬರೆದಿದೆ.
ಶುಕ್ರವಾರ ರಿಯಾ ರಕ್ಷಣೆ ಕಲ್ಪಿಸುವಂತೆ ಸ್ಯಾಂಟಾಕ್ರೂಜ್ ಪೊಲೀಸ್ ಠಾಣೆಗೆ ತೆರಳಿದ್ದರು. ಈ ವೇಳೆ ಕೆಲವರು ತನ್ನ ನಿವಾಸದ ಕಾಂಪೌಂಡ್‌ಗೆ ಬಲವಂತವಾಗಿ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದರು.
ಪ್ರಕರಣ ಸಂಬಂಧ ರಿಯಾ ಮತ್ತು ಅವರ ಸೋದರ ಶೌಬಿಕ್ ಇಬ್ಬರನ್ನು ತನಿಖಾಧಿಕಾರಿಗಳು ಪ್ರಶ್ನೆಗಳನ್ನು ಕೇಳಿದರು ಎನ್ನಲಾಗಿದೆ. ಅಂತೆಯೇ ರಿಯಾ ಮತ್ತು ಸೌಬಿಕ್ ಅವರನ್ನು ಸಿಬಿಐ ಪ್ರತ್ಯೇಕವಾಗಿ ವಿಚಾರಣೆಗೆ ಒಳಪಡಿಸಿದ್ದು, ಅವರ ಹೇಳಿಕೆಗಳಲ್ಲಿ ವ್ಯತ್ಯಾಸಗಳೇನಾದರೂ ಇವೆಯೇ ಎಂಬುದನ್ನು ಸೂಕ್ಷ್ಮವಾಗಿ ಗಮನಿಸಿದೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


