ಪುಲ್ವಾಮಾ ಎನ್‌ಕೌಂಟರ್: ಮೂವರು ಹಿಜ್ಬುಲ್ ಉಗ್ರರು ಹತ, ಓರ್ವ ಸೈನಿಕ ಹುತಾತ್ಮ
ದಕ್ಷಿಣ ಕಾಶ್ಮೀರ ಜಿಲ್ಲೆಯಾದ ಪುಲ್ವಾಮಾದಲ್ಲಿ ಶನಿವಾರ ಬೆಳಗ್ಗೆ ಶೋಧ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ನ ಕಮಾಂಡರ್ ಸೇರಿದಂತೆ ಸಂಘಟನೆಯ ಮೂವರು ಉಗ್ರರು ಹತರಾಗಿದ್ದಾರೆ.

ಶ್ರೀನಗರ: ದಕ್ಷಿಣ ಕಾಶ್ಮೀರ ಜಿಲ್ಲೆಯಾದ ಪುಲ್ವಾಮಾದಲ್ಲಿ ಶನಿವಾರ ಬೆಳಗ್ಗೆ ಶೋಧ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ನ ಕಮಾಂಡರ್ ಸೇರಿದಂತೆ ಸಂಘಟನೆಯ ಮೂವರು ಉಗ್ರರು ಹತರಾಗಿದ್ದಾರೆ.
ಇದರೊಂದಿಗೆ ಕಳೆದ 24 ಗಂಟೆಯಲ್ಲಿ ದಕ್ಷಿಣ ಕಾಶ್ಮೀರದಲ್ಲಿ ನಡೆದ ಎರಡು ಪ್ರತ್ಯೇಕ ಎನ್‍ಕೌಂಟರ್ ಗಳಲ್ಲಿ ಅಲ್-ಬದರ್ ಗೆ ಸೇರಿದ ನಾಲ್ವರು ಮತ್ತು ಮೂವರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರರು ಸೇರಿದಂತೆ ಒಟ್ಟು ಏಳು ಉಗ್ರರನ್ನು ಹತ್ಯೆ ಮಾಡಲಾಗಿದೆ.
ಪುಲ್ವಾಮಾದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರರ ಹತ್ಯೆಯು ಭದ್ರತಾ ಪಡೆಗಳಿಗೆ ದೊರೆತ ದೊಡ್ಡ ಯಶಸ್ಸು ಎಂದು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ದಿಲ್‌ಬಾಗ್ ಸಿಂಗ್ ಹೇಳಿದ್ದಾರೆ.
ಹತರಾದವರ ಪೈಕಿ ಒಬ್ಬನಾದ ಆದಿಲ್, ಹತ್ಯೆಗಳು ಸೇರಿದಂತೆ ಅನೇಕ ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


