ಕಾಲೇಜ್ ಮೆರಿಟ್ ಲಿಸ್ಟ್ ನಲ್ಲಿ ಮಾಜಿ ನೀಲಿ ತಾರೆ ಸನ್ನಿ ಲಿಯೋನ್ ಮತ್ತೆ ಟಾಪ್!
ಪಶ್ಚಿಮ ಬಂಗಾಳದ ಕಾಲೇಜೊಂದರ ಪ್ರವೇಶಾತಿಯ ಮೆರಿಟ್ ಲಿಸ್ಟ್ ನಲ್ಲಿ ಮಾಜಿ ನೀಲಿತಾರೆ , ಬಾಲಿವುಡ್ ನಟಿ ಸನ್ನಿ ಲಿಯೋನ್ ಹೆಸರು ಸತತ ಮೂರನೇ ದಿನವೂ ಕಾಣಿಸಿಕೊಂಡಿದ್ದು, ಕಿಡಿಗೇಡಿಗಳ ವಿರುದ್ಧ ಕಾಲೇಜ್ ಆಡಳಿತ ಮಂಡಳಿ ಪೊಲೀಸರಿಗೆ ದೂರು ಸಲ್ಲಿಸಿದೆ.

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಕಾಲೇಜೊಂದರ ಪ್ರವೇಶಾತಿಯ ಮೆರಿಟ್ ಲಿಸ್ಟ್ ನಲ್ಲಿ ಮಾಜಿ ನೀಲಿತಾರೆ, ಬಾಲಿವುಡ್ ನಟಿ ಸನ್ನಿ ಲಿಯೋನ್ ಹೆಸರು ಸತತ ಮೂರನೇ ದಿನವೂ ಕಾಣಿಸಿಕೊಂಡಿದ್ದು, ಕಿಡಿಗೇಡಿಗಳ ವಿರುದ್ಧ ಕಾಲೇಜ್ ಆಡಳಿತ ಮಂಡಳಿ ಪೊಲೀಸರಿಗೆ ದೂರು ಸಲ್ಲಿಸಿದೆ.
ಬರಾಸತ್ ಸರ್ಕಾರಿ ಕಾಲೇಜಿನ ಇಂಗ್ಲೀಷ್ ಅನರ್ಸ್ ಪಟ್ಟಿಯಲ್ಲಿ ಸನ್ನಿ ಲಿಯೋನ್ ಹೆಸರು ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಅಮೆರಿಕದ ನೀಲಿ ತಾರೆ ಡ್ಯಾನಿ ಡೇನಿಯಲ್ ಮತ್ತು ಮಾಜಿ ನೀಲಿ ತಾರೆ ಮಿಯಾ ಖಾಲಿಫಾ ಅವರ ಹೆಸರು ನೋಂದಣಿ ಸಂಖ್ಯೆಯ ಸಮೇತ ಕಾಣಿಸಿಕೊಂಡಿದೆ.
ಕಿಡಿಗೇಡಿಗಳ ವಿರುದ್ಧ ಬರಾಸತ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ ಎಂದು ಕಾಲೇಜಿನ ಸಿಬ್ಬಂದಿಯೊಬ್ಬರು
ಹೇಳಿದ್ದಾರೆ.ಕಾಲೇಜಿಗೆ ಕೆಟ್ಟ ಹೆಸರು ತರುವ ನಿಟ್ಟಿನಲ್ಲಿ ಕಿಡಿಗೇಡಿಗಳು ಈ ರೀತಿಯ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿ ತೃಣಮೂಲ ಛಾತ್ರ ಪರಿಷದ್ ನಿಂದ ನಡೆಯುತ್ತಿರುವ ಕಾಲೇಜ್ ವಿದ್ಯಾರ್ಥಿಗಳ ಸಂಘಟನೆಯೊಂದು ಮತ್ತೊಂದು ಪ್ರತ್ಯೇಕವಾದ ಎಫ್ ಐಆರ್ ದಾಖಲಿಸಿದೆ.
ಶುಕ್ರವಾರ ದಕ್ಷಿಣ 24 ಪರಗಣ ಜಿಲ್ಲೆಯ ಬುಡ್ಗೆ ಬುಡ್ಗೆ ಕಾಲೇಜಿನ ಇಂಗ್ಲೀಷ್ ಅನರ್ಸ್ ವಿಷಯಕ್ಕಾಗಿ ಆಯ್ಕೆಯಾದ 157 ವಿದ್ಯಾರ್ಥಿಗಳ ಪೈಕಿಯಲ್ಲಿ ಸನ್ನಿ ಲಿಯೋನ್ ಹೆಸರು 151ನೇ ಸ್ಥಾನದಲ್ಲಿ ಕಾಣಿಸಿಕೊಂಡಿತ್ತು. ಆನ್ ಲೈನ್ ವ್ಯವಸ್ಥೆಯಲ್ಲಿ ಕಿಡಿಗೇಡಿಗಳು ಈ ರೀತಿಯ ಕೃತ್ಯ ಮಾಡಲು ಸಾಧ್ಯ ಎಂದು ಪ್ರಶ್ನಿಸಿರುವ ವಿದ್ಯಾರ್ಥಿ ಸಂಘಟನೆ ಈ ಸಂಬಂಧ ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


