ಭಾರತದ ಆರ್ಥಿಕತೆಯನ್ನು ಮೋದಿ ಸರ್ಕಾರ ಹೇಗೆ ನಾಶ ಮಾಡಿತು; ರಾಹುಲ್ ಗಾಂಧಿಯಿಂದ ವಿಡಿಯೋ ಸರಣಿ ಟ್ರೈಲರ್
ಕೇಂದ್ರ ಸರ್ಕಾರ ದೇಶದ ಆರ್ಥಿಕತೆಯನ್ನು ನಿಭಾಯಿಸುವಲ್ಲಿ ವಿಫಲವಾಗಿದೆ ಎಂಬ ತಮ್ಮ ಆರೋಪಗಳನ್ನು ಇನ್ನಷ್ಟು ಬಲಗೊಳಿಸಲು ನಿರ್ಧರಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೋಮವಾರ ಈ ಸಂಬಂಧ ವಿಡಿಯೋಗಳನ್ನು ಬಿಡುಗಡೆಗೊಳಿಸಲು ನಿರ್ಧರಿಸಿದ್ದಾರೆ.

ನವದೆಹಲಿ: ಕೇಂದ್ರ ಸರ್ಕಾರ ದೇಶದ ಆರ್ಥಿಕತೆಯನ್ನು ನಿಭಾಯಿಸುವಲ್ಲಿ ವಿಫಲವಾಗಿದೆ ಎಂಬ ತಮ್ಮ ಆರೋಪಗಳನ್ನು ಇನ್ನಷ್ಟು ಬಲಗೊಳಿಸಲು ನಿರ್ಧರಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೋಮವಾರ ಈ ಸಂಬಂಧ ವಿಡಿಯೋಗಳನ್ನು ಬಿಡುಗಡೆಗೊಳಿಸಲು ನಿರ್ಧರಿಸಿದ್ದಾರೆ.
ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ತೀವ್ರಗೊಳಿಸಲು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಜ್ಜಾಗಿದ್ದು, ಮೋದಿ ನೇತೃತ್ವದ ಸರ್ಕಾರ ಭಾರತೀಯ ಆರ್ಥಿಕತೆಯನ್ನು ಹೇಗೆ ನಾಶ ಮಾಡಿತು ಎಂಬ ಕುರಿತು ವಿಡಿಯೋ ಸರಣಿಯನ್ನು ಆರಂಭಿಸುವುದಾಗಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಾಹುಲ್, 'ಮೋದಿ ಸರ್ಕಾರ ಭಾರತೀಯ ಆರ್ಥಿಕತೆಯನ್ನು ಹೇಗೆ ನಾಶ ಮಾಡಿದೆ ಎಂಬುದರ ಕುರಿತ ವಿಡಿಯೋ ಸರಣಿಗಳನ್ನು ವೀಕ್ಷಿಸಿರಿ. ನಾಳೆ ಬೆಳಗ್ಗೆ 10 ಗಂಟೆಗೆ ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಮೊದಲ ವಿಡಿಯೋ ಬರಲಿದೆ' ಎಂದಿದ್ದಾರೆ.
ಈ ಸರಣಿಯ ಮೊದಲ ವೀಡಿಯೊದ ಟ್ರೈಲರ್ ಅನ್ನು ರಾಹುಲ್ ಗಾಂಧಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ‘ಅರ್ಥವ್ಯವಸ್ಥಾ ಕಿ ಬಾತ್- ರಾಹುಲ್ ಗಾಂಧಿ ಕೆ ಸಾಥ್’ ಎಂಬುದು ಅದರ ಶೀರ್ಷಿಕೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


