ಅಡ್ವೊಕೇಟ್ ಪ್ರಶಾಂತ್ ಭೂಷಣ್ ನ್ಯಾಯಾಂಗ ನಿಂದನೆ ಪ್ರಕರಣ:ನಾಳೆ ಶಿಕ್ಷೆ ಪ್ರಮಾಣ ಪ್ರಕಟಿಸಲಿರುವ ಸುಪ್ರೀಂ ಕೋರ್ಟ್
ಅಡ್ವೊಕೇಟ್ ಪ್ರಶಾಂತ್ ಭೂಷಣ್ ಅವರ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಶಿಕ್ಷೆಯ ಪ್ರಮಾಣವನ್ನು ನಾಳೆ ಪ್ರಕಟಿಸಲಿದೆ.

ನವದೆಹಲಿ: ಅಡ್ವೊಕೇಟ್ ಪ್ರಶಾಂತ್ ಭೂಷಣ್ ಅವರ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಶಿಕ್ಷೆಯ ಪ್ರಮಾಣವನ್ನು ನಾಳೆ ಪ್ರಕಟಿಸಲಿದೆ.
ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠ ನ್ಯಾಯಾಂಗ ನಿಂದನೆ ಕಾಯ್ದೆಯಡಿ ನಾಳೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ. ಆರು ತಿಂಗಳು ಜೈಲುಶಿಕ್ಷೆ ಅಥವಾ 2 ಸಾವಿರದವರೆಗೆ ದಂಡ ಅಥವಾ ದಂಡ ಮತ್ತು ಜೈಲುಶಿಕ್ಷೆ ಎರಡೂ ಶಿಕ್ಷೆಯನ್ನು ನ್ಯಾಯವಾದಿ ಪ್ರಶಾಂತ್ ಭೂಷಣ್ ಎದುರಿಸಬೇಕಾಗಬಹುದು.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಮತ್ತು ನ್ಯಾಯಾಂಗ ವ್ಯವಸ್ಥೆಯನ್ನು ಟೀಕಿಸಿ ಅಡ್ವೊಕೇಟ್ ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿದ್ದು ವಿವಾದವೆಬ್ಬಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಆಗಸ್ಟ್ 14ರಂದು ಸುಪ್ರೀಂ ಕೋರ್ಟ್ ಪ್ರಶಾಂತ್ ಭೂಷಣ್ ಅವರನ್ನು ಅಪರಾಧಿ ಎಂದು ತೀರ್ಮಾನ ಮಾಡಿ ಕ್ಷಮೆ ಕೋರುವಂತೆ ಸೂಚಿಸಿತ್ತು. ಅದಕ್ಕೆ ನಂತರ ಅವರು ಕ್ಷಮೆ ಕೋರಲು ನಿರಾಕರಿಸಿದ್ದರು.
ನಂತರ ಆಗಸ್ಟ್ 25ರಂದು ಅಡ್ವೊಕೇಟ್ ಪ್ರಶಾಂತ್ ಭೂಷಣ್ ಪರ ವಕೀಲ ರಾಜೀವ್ ಧವನ್, ನ್ಯಾಯಾಲಯ ತನ್ನ ತೀರ್ಪನ್ನು ಹಿಂತೆಗೆದುಕೊಂಡು ನ್ಯಾಯಾಂಗ ನಿಂದನೆ ಆರೋಪಕ್ಕೆ ಯಾವುದೇ ಶಿಕ್ಷೆ ವಿಧಿಸದಂತೆ ಕೋರಿದ್ದರು. ಕೇಸಿಗೆ ಇತಿಶ್ರೀ ಹಾಡುವಂತೆ ಕೋರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


