ದೇಶ

ಲೈಂಗಿಕ ಕಿರುಕುಳ ಪ್ರಕರಣ: ಸಂತ್ರಸ್ತೆ, ಬಿಜೆಪಿ ಶಾಸಕನ ಮಂಪರು ಪರೀಕ್ಷೆ ನಡೆಸಲು ಪತ್ನಿ ಮನವಿ

ಬಿಜೆಪಿ ಶಾಸಕ ಮಹೇಶ್ ನೆಗಿ ಹಾಗೂ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಮಹಿಳೆಯನ್ನು ಮಂಪರು ಪರೀಕ್ಷೆಗೆ ಒಳಪಡಿಸುವಂತೆ ನೇಗಿ ಅವರ ಪತ್ನಿ ಮನವಿ ಮಾಡಿರುವುದಾಗಿ ಪೊಲೀಸರು ಭಾನುವಾರ ಹೇಳಿದ್ದಾರೆ.ಬಿಜೆಪಿ ಶಾಸಕನ ಪತ್ನಿಯಿಂದ ಮನವಿ ಪತ್ರವೊಂದನ್ನು ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಲೈಂಗಿಕ ಕಿರುಕುಳ ಪ್ರಕರಣ: ಸಂತ್ರಸ್ತೆ, ಬಿಜೆಪಿ ಶಾಸಕನ ಮಂಪರು ಪರೀಕ್ಷೆ ನಡೆಸಲು ಪತ್ನಿ ಮನವಿ
ಉತ್ತರ್ ಖಂಡ್ ಪೊಲೀಸರ ಲಾಂಛನ
Published On :

ಡೆಹ್ರಡೂನ್:  ಬಿಜೆಪಿ ಶಾಸಕ ಮಹೇಶ್ ನೆಗಿ ಹಾಗೂ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಮಹಿಳೆಯನ್ನು  ಮಂಪರು ಪರೀಕ್ಷೆಗೆ ಒಳಪಡಿಸುವಂತೆ ನೇಗಿ ಅವರ ಪತ್ನಿ ಮನವಿ ಮಾಡಿರುವುದಾಗಿ ಪೊಲೀಸರು ಭಾನುವಾರ ಹೇಳಿದ್ದಾರೆ.ಬಿಜೆಪಿ ಶಾಸಕನ ಪತ್ನಿಯಿಂದ ಮನವಿ ಪತ್ರವೊಂದನ್ನು ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆಯ ಪತಿಯಿಂದ ಹೇಳಿಕೆಯನ್ನು ಇನ್ನೂ ಪಡೆದಿಲ್ಲ. ಮಹಿಳಾ ಆಯೋಗ ಮತ್ತು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ಪತ್ರವನ್ನು ಸ್ವೀಕರಿಸಿದ್ದೇವೆ. ಎಲ್ಲಾ ಆಯಾಮಾಗಳಲ್ಲಿ ಪ್ರಕರಣದ ತನಿಖೆ ನಡೆಸಲಾಗುವುದು ಎಂದು ಡಿಎಸ್ ಪಿ
 ಅಂಜು ಕುಮಾರ್ ತಿಳಿಸಿದ್ದಾರೆ.

ಈ ಮಧ್ಯೆ ಸಂತ್ರಸ್ತೆಯ ಹೇಳಿಕೆಯನ್ನು ಇನ್ನೂ ಪಡೆಯದ ಪೊಲೀಸರ ನಿರ್ಲಕ್ಷ್ಯ ಧೋರಣೆ ಖಂಡಸಿ ಉತ್ತರ್ ಖಂಡ್ ಕಾಂಗ್ರೆಸ್ ಪಕ್ಷದಿಂದ ಜಿಲ್ಲಾ ಕೇಂದ್ರಗಳಲ್ಲಿ  ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.

ಬಿಜೆಪಿ ಶಾಸಕನಿಂದ ಎರಡು ವರ್ಷದಿಂದ ನಿರಂತರವಾಗಿ ಅತ್ಯಾಚಾರಕ್ಕೊಳಗಾಗಿದ್ದು, ತನ್ನ ಪುತ್ರಿಯ ಡಿಎನ್ ಎ ಮಾದರಿಯನ್ನು ಶಾಸಕರ ಜೊತೆ ಹೊಂದಾಣಿಕೆ ಮಾಡಬೇಕೆಂದು ಸಂತ್ರಸ್ತ ಮಹಿಳೆ ಈ ಹಿಂದೆ ಹೇಳಿಕೆ ನೀಡಿದ್ದಳು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.