ಜಮ್ಮು-ಕಾಶ್ಮೀರ:ಶ್ರೀನಗರದಲ್ಲಿ ಎನ್ ಕೌಂಟರ್, 3 ಉಗ್ರರ ಹತ್ಯೆ, ಪೊಲೀಸ್ ಹುತಾತ್ಮ
ಕಣಿವೆ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದ್ದು, ಕಳೆದೆರಡು ದಿನಗಳಿಂದ ಎನ್ ಕೌಂಟರ್ ನಡೆದು ಉಗ್ರರು ಹತರಾಗಿದ್ದಾರೆ. ಭದ್ರತಾ ಪಡೆ ಪೊಲೀಸರು ಕೂಡ ಹುತಾತ್ಮರಾಗಿದ್ದಾರೆ.

ಜಮ್ಮು:ಕಣಿವೆ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದ್ದು, ಕಳೆದೆರಡು ದಿನಗಳಿಂದ ಎನ್ ಕೌಂಟರ್ ನಡೆದು ಉಗ್ರರು ಹತರಾಗಿದ್ದಾರೆ. ಭದ್ರತಾ ಪಡೆ ಪೊಲೀಸರು ಕೂಡ ಹುತಾತ್ಮರಾಗಿದ್ದಾರೆ.
ಕಳೆದ ರಾತ್ರಿ ಶ್ರೀನಗರದ ಪಂತ ಚೌಕ್ ನಲ್ಲಿ ಎನ್ ಕೌಂಟರ್ ನಡೆದಿದ್ದು, ಮೂವರು ಉಗ್ರರನ್ನು ಹತ್ಯೆಗೈಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಓರ್ವ ಪೊಲೀಸ್ ಸಿಬ್ಬಂದಿ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾಗಿದ್ದಾರೆ.
ಶ್ರೀನಗರದ ಹೊರವಲಯದಲ್ಲಿ ನಾಕಾಬಂದಿ ನಡೆಸಿದ್ದ ಪೊಲೀಸರು ಮತ್ತು ಸಿಆರ್ ಪಿಎಫ್ ಮೇಲೆ ಉಗ್ರರು ದಾಳಿ ಆರಂಭಿಸಿದರು. ಕೂಡಲೇ ಪ್ರದೇಶವನ್ನು ಸುತ್ತುವರಿದ ಪೊಲೀಸರು ಶೋಧ ಕಾರ್ಯ ಆರಂಭಿಸಿದರು. ಈ ವೇಳೆ ಮತ್ತೆ ಉಗ್ರರು ದಾಳಿ ಆರಂಭಿಸಿದರು. ಅದಕ್ಕೆ ದಿಟ್ಟ ಉತ್ತರ ನೀಡಿದ ಪೊಲೀಸರು ಎನ್ ಕೌಂಟರ್ ನಲ್ಲಿ ಮೂವರು ಉಗ್ರರನ್ನು ಸದೆಬಡಿದಿದ್ದಾರೆ.
ಮೊನ್ನೆ ಶುಕ್ರವಾರ ರಾತ್ರಿಯಿಂದ ನಿನ್ನೆಯವರೆಗೆ ಜಮ್ಮು-ಕಾಶ್ಮೀರದಲ್ಲಿ ನಡೆಯುತ್ತಿರುವ ಎರಡನೇ ಎನ್ ಕೌಂಟರ್ ಇದಾಗಿದೆ. ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ನಿನ್ನೆ ನಡೆದ ಎನ್ ಕೌಂಟರ್ ನಲ್ಲಿ ಹಿಜ್ ಬುಲ್ ಮುಜಾಹಿದ್ದೀನ್ ಸಂಘಟನೆಯ ಮೂವರು ಉಗ್ರರು ಹತ್ಯೆಯಾಗಿದ್ದು ಓರ್ವ ಯೋಧರು ಹುತಾತ್ಮರಾಗಿದ್ದಾರೆ.
ಸದ್ಯ ವರದಿ ಬರುವ ಹೊತ್ತಿಗೆ ಇನ್ನೂ ಅಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಸಿಕ್ಕಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


