ದೇಶ

ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಆರೋಗ್ಯ ಮತ್ತಷ್ಟು ಕ್ಷೀಣ, ಚಿಕಿತ್ಸೆ ಮುಂದುವರಿಕೆ: ವೈದ್ಯರು

ಶ್ವಾಸಕೋಶದ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ. ದಿನ ಕಳೆದಂತೆ ಅವರ ಆರೋಗ್ಯ ಸ್ಥಿತಿಕ್ಷೀಣಿಸುತ್ತಿದೆ ಎಂದು ಸೇನಾ ಆಸ್ಪತ್ರೆ ಹೇಳಿದ್ದಾರೆ.

ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಆರೋಗ್ಯ ಮತ್ತಷ್ಟು ಕ್ಷೀಣ, ಚಿಕಿತ್ಸೆ ಮುಂದುವರಿಕೆ: ವೈದ್ಯರು
ಪ್ರಣಬ್ ಮುಖರ್ಜಿ
Published On :

ನವದೆಹಲಿ: ಶ್ವಾಸಕೋಶದ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ. ದಿನ ಕಳೆದಂತೆ ಅವರ ಆರೋಗ್ಯ ಸ್ಥಿತಿಕ್ಷೀಣಿಸುತ್ತಿದೆ ಎಂದು ಸೇನಾ ಆಸ್ಪತ್ರೆ ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಆರ್ ಅಂಡ್ ಆರ್ ಸೇನಾ ಆಸ್ಪತ್ರೆ ಮಾಹಿತಿ ನೀಡಿದ್ದು, ಶ್ವಾಸಕೋಶದ ಸೋಂಕಿನಿಂದ ಪ್ರಣಬ್ ಮುಖರ್ಜಿ ಆಗಸ್ಟ್ 10ರಂದು ದೆಹಲಿಯ ಸೇನಾ ಸಂಶೋಧನೆ ಮತ್ತು ರೆಫರಲ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಮೂತ್ರಪಿಂಡದಲ್ಲೂ ಸಮಸ್ಯೆಯಾಗಿದೆ. ದಿನಕಳೆದಂತೆ ಪ್ರಣಬ್  ಮುಖರ್ಜಿ ಅವರ ಆರೋಗ್ಯ ಕ್ಷೀಣಿಸುತ್ತಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. 

ಪ್ರಣಬ್​ ಮುಖರ್ಜಿ ವೆಂಟಿಲೇಟರ್​ ಸಹಾಯದಿಂದ ಉಸಿರಾಡುತ್ತಿದ್ದಾರೆ. ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿದೆ. ನಾವು ಎಷ್ಟೇ ಪ್ರಯತ್ನಿಸದರೂ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿಲ್ಲ ಎಂದು ಸೇನಾ ಆಸ್ಪತ್ರೆ ವೈದ್ಯರು ಹೇಳಿದ್ದಾರೆ.

84 ವರ್ಷದ ಪ್ರಣಬ್ ಮುಖರ್ಜಿ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಸೇನಾ ಆಸ್ಪತ್ರೆಯಲ್ಲಿ ಅವರಿಗೆ ಆಪರೇಷನ್ ಮಾಡಲಾಗಿತ್ತು. ಬಳಿಕ ಅವರ ಆರೋಗ್ಯ ಹದಗೆಟ್ಟಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.