ದೇಶ

ಚೀನಾಗೆ ಯಾವಾಗ ತಕ್ಕ ತಿರುಗೇಟು ನೀಡುತ್ತೀರಾ ಮೋದಿ ಜೀ?: ಅತಿಕ್ರಮಣ ಕುರಿತು ಕಾಂಗ್ರೆಸ್ ಟೀಕೆ

ಗಾಲ್ವಾನ್ ಕಣಿವೆ ಸಂಘರ್ಷದ ಬಳಿಕ ಮತ್ತೆ ಕಾಲು ಕೆರೆದು ಭಾರತೀಯ ಗಡಿ ಅತಿಕ್ರಮಣಕ್ಕೆ ಮುಂದಾದ ಚೀನಾ ವಿರುದ್ಧ ಯಾವಾಗ ತಕ್ಕ ತಿರುಗೇಟು ನೀಡುತ್ತೀರಾ ಮೋದಿ ಜೀ ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ಚೀನಾಗೆ ಯಾವಾಗ ತಕ್ಕ ತಿರುಗೇಟು ನೀಡುತ್ತೀರಾ ಮೋದಿ ಜೀ?: ಅತಿಕ್ರಮಣ ಕುರಿತು ಕಾಂಗ್ರೆಸ್ ಟೀಕೆ
ರಂದೀಪ್ ಸುರ್ಜೇವಾಲ
Published On :

ನವದೆಹಲಿ: ಗಾಲ್ವಾನ್ ಕಣಿವೆ ಸಂಘರ್ಷದ ಬಳಿಕ ಮತ್ತೆ ಕಾಲು ಕೆರೆದು ಭಾರತೀಯ ಗಡಿ ಅತಿಕ್ರಮಣಕ್ಕೆ ಮುಂದಾದ ಚೀನಾ ವಿರುದ್ಧ ಯಾವಾಗ ತಕ್ಕ ತಿರುಗೇಟು ನೀಡುತ್ತೀರಾ ಮೋದಿ ಜೀ ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ಆಗಸ್ಟ್ 29-30ರ ದಿನದಂದು, ಅಂದರೆ ಶುಕ್ರವಾರ ರಾತ್ರಿ ಪಾಂಗೋಂಗ್ ಟ್ಸೋ ಸರೋವರದ ದಕ್ಷಿಣ ಭಾಗದಲ್ಲಿ ಚೀನಾದ ಪಿಎಲ್​ಎ ಸೈನಿಕರು ಅತಿಕ್ರಮಣಕ್ಕೆ ಮುಂದಾಗಿದ್ದಾರೆ. ಇದನ್ನು ಮೊದಲೇ ಊಹಿಸಿದ್ದ ಭಾರತದ ಭದ್ರತಾ ಪಡೆಗಳು ತತ್​ಕ್ಷಣವೇ ಜಾಗೃತಗೊಂಡು ಚೀನೀ ಸೈನಿಕರನ್ನು ಹಿಮ್ಮೆಟ್ಟಿಸಿದ್ದಾರೆ.

“ಪ್ಯಾಂಗೋಂಗ್ ಟ್ಸೋ ಸರೋವರದ ಭಾಗದಲ್ಲಿ ಚೀನೀ ಸೈನಿಕರಿಂದ ಈ ಚಟುವಟಿಕೆ ನಡೆಯಬಹುದು ಎಂದು ಭಾರತದ ಪಡೆಗಳು ಮೊದಲೇ ಅಂದಾಜು ಮಾಡಿದ್ದವು. ಹಾಗಾಗಿ, ನಮ್ಮ ಸೇನಾ ನಿಯೋಜನೆ ಹೆಚ್ಚಿಸಿದೆವು. ವಿವಾದಿತ ಗಡಿ ಸಮೀಪ ನಿಯೋಜನೆಗೊಂಡಿದ್ದ ಸೈನಿಕರು ಗಡಿ ಯಥಾಸ್ಥಿತಿಯನ್ನು  ಮಾರ್ಪಾಡು ಮಾಡುವ ಚೀನಾ ದುರುದ್ದೇಶವನ್ನು ವಿಫಲಗೊಳಿಸಿದ್ದಾರೆ. ಮಾತುಕತೆ ಮೂಲಕ ಶಾಂತಿ ಕಾಪಾಡಲು ಭಾರತದ ಸೇನೆ ಬದ್ಧವಾಗಿದೆ. ಆದರೆ, ತನ್ನ ಭೂಪ್ರದೇಶದ ರಕ್ಷಣೆಗೂ ಅಷ್ಟೇ ಕಟಿಬದ್ಧವಾಗಿದೆ. ಚುಶುಲ್ ಪ್ರದೇಶದಲ್ಲಿ ಎರಡೂ ದೇಶಗಳ ಸೇನಾಪಡೆಗಳ ಬ್ರಿಗೇಡ್ ಕಮಾಂಡರ್ ಮಟ್ಟದಲ್ಲಿ ಫ್ಲಾಗ್  ಮೀಟಿಂಗ್ ನಡೆಯುತ್ತಿದ್ದು, ಇದರಲ್ಲಿ ಈ ವಿಚಾರಗಳನ್ನ ಚರ್ಚಿಸಲಾಗುತ್ತಿದೆ” ಎಂದು ಸೇನಾ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದೇ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಅವರು, ಒಂದಲ್ಲ.. ಎರಡಲ್ಲ.. ಹಲವು ಬಾರಿ ಚೀನಾ ಸೈನಿಕರು ಎಲ್ಎಸಿ ಒಪ್ಪಂದ ಮುರಿದ ಭಾರತದ ಗಡಿ ಅತಿಕ್ರಮಣ ಮಾಡಿದ್ದಾರೆ. ಆದರೆ ಮೋದಿ ಸರ್ಕಾರ ತಿರುಗೇಟು ನೀಡುವುದಾಗಿ ಹೇಳಿ ಮೌನಕ್ಕೆ ಶರಣಾಗಿದೆ. ಚೀನಾಗೆ ಯಾವಾಗ ತಕ್ಕ ತಿರುಗೇಟು ನೀಡುತ್ತೀರಾ ಮೋದಿ ಜೀ ಎಂದು ಪ್ರಶ್ನಿಸಿದ್ದಾರೆ.

ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ರಂದೀಪ್ ಸುರ್ಜೇವಾಲಾ ಅವರು, ನಮ್ಮ ದೇಶದ ಗಡಿಯಲ್ಲಿನ ಭೂ ಭಾಗವನ್ನು ಚೀನಾ ಅತಿಕ್ರಮಣ ಮಾಡುತ್ತಿದೆ. ಸೈನಿಕರ ವಿರುದ್ಧದ ಘರ್ಷಣೆಗಳು ನಡೆಯುತ್ತಲೇ ಇವೆ. ದೇಶದಲ್ಲಿ ಜಿಡಿಪಿ ಪಾತಾಳಕ್ಕೆ ಕುಸಿಯುತ್ತಿದೆ. ಸುಮಾರು 17 ಕೋಟಿ ಉದ್ಯೋಗ ನಷ್ಟವಾಗಿದೆ. ಬಿಜೆಪಿ ಮತ್ತು ಫೇಸ್ ಬುಕ್ ನೆಕ್ಸಸ್ ಅಪಹರಣ ಮಾಡಿವೆ. ಈ ಪ್ರಶ್ನೆಗಳಿಗೆ ಮೋದಿ ಸರ್ಕಾರ ಉತ್ತರ ನೀಡುವುದಿಲ್ಲ. ಆದರೆ ಕಾಂಗ್ರೆಸ್, ಸೋನಿಯಾ ಗಾಂಧಿ. ಹವಾಮಾನ ಮತ್ತು ದೇವರುಗಳ ಕುರಿತು ಬಿಜೆಪಿ ಮಾತನಾಡುತ್ತಿದೆ ಎಂದು ಹೇಳಿದ್ದಾರೆ.

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.