ಇಂದು ರೈತರ ಜತೆ ಕೇಂದ್ರದ ಮಹತ್ವದ ಮಾತುಕತೆ ಹಿನ್ನೆಲೆ, ಶಾ ಭೇಟಿಯಾಗಲಿರುವ ಅಮರೀಂದರ್ ಸಿಂಗ್
ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರು ಹಾಗೂ ಕೇಂದ್ರ ಸರ್ಕಾರದ ನಡುವಣ ಮಾತುಕತೆಯ ಹಿನ್ನೆಲೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ.

ನವದೆಹಲಿ: ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರು ಹಾಗೂ ಕೇಂದ್ರ ಸರ್ಕಾರದ ನಡುವಣ ಮಾತುಕತೆಯ ಹಿನ್ನೆಲೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ.
ಇಂದು ಬೆಳಗ್ಗೆ ಶಾ ಅವರ ನಿವಾಸದಲ್ಲಿ ಮಾತುಕತೆ ನಡೆಸಲಿರುವ ಅಮರೀಂದರ್ ಸಿಂಗ್, ಸೌಹಾರ್ದಯುತವಾಗಿ ಸಮಸ್ಯೆ ಪರಿಹರಿಸುವ ಪ್ರಯತ್ನ ನಡೆಸಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಪಂಜಾಬ್ ಮುಖ್ಯಮಂತ್ರಿ ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಕೇಂದ್ರದ ಕೃಷಿ ಶಾಸನಗಳನ್ನು ತಿರಸ್ಕರಿಸುವ ನಿರ್ಣಯವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.
ಎಲ್ಲರ ಸಾಮೂಹಿಕ ಹಿತಾಸಕ್ತಿಯಿಂದ ಕೇಂದ್ರ ಸರ್ಕಾರ ಮತ್ತು ರೈತರ ನಡುವಣ ಮಧ್ಯಸ್ಥಿಕೆಗೆ ತಾವು ಹಾಗೂ ಅವರ ಸರ್ಕಾರ ಬದ್ಧವಾಗಿರುವುದಾಗಿ ಸಿಂಗ್ ಹೇಳಿದ್ದಾರೆ. ಪ್ರತಿಭಟನೆ ನಡೆಸುತ್ತಿರುವ ರೈತರಲ್ಲಿ ಹೆಚ್ಚಿನವರು ಪಂಜಾಬ್ ರಾಜ್ಯದವರಾಗಿದ್ದಾರೆ. ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಏಳುದಿನಗಳಿಂದ ಅವರು ಪ್ರತಿಭಟನೆಗೆ ಕುಳಿತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


