ದೇಶ

ಅಖಿಲ ಭಾರತ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಬಿ.ವಿ. ಶ್ರೀನಿವಾಸ್ ನೇಮಕ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ಬಿ.ವಿ.ಶ್ರೀನಿವಾಸ್ ಅವರನ್ನು ಪಕ್ಷದ ಯುವ ವಿಭಾಗವಾದ ಭಾರತೀಯ ಯುವ ಕಾಂಗ್ರೆಸ್ (ಐವೈಸಿ)ನ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.

ಅಖಿಲ ಭಾರತ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಬಿ.ವಿ. ಶ್ರೀನಿವಾಸ್ ನೇಮಕ
ಬಿ.ವಿ.ಶ್ರೀನಿವಾಸ್
Published On :

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ಬಿ.ವಿ.ಶ್ರೀನಿವಾಸ್ ಅವರನ್ನು ಪಕ್ಷದ ಯುವ ವಿಭಾಗವಾದ ಭಾರತೀಯ ಯುವ ಕಾಂಗ್ರೆಸ್ (ಐವೈಸಿ)ನ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.

ನೇಮಕಾತಿ ತಕ್ಷಣದಿಂದ ಜಾರಿಗೆ ಬರಲಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ ಸಿ ವೇಣುಗೋಪಾಲ್ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಳೆದ ವರ್ಷ ಜುಲೈನಲ್ಲಿ ಶ್ರೀನಿವಾಸ್ ಅವರನ್ನು ಭಾರತೀಯ ಯುವ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. 

ಕಳೆದ ವರ್ಷ ಆಗಸ್ಟ್‌ನಲ್ಲಿ ಶ್ರೀನಿವಾಸ್ ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ಯ ರಾಷ್ಟ್ರೀಯ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಕ್ಷದ ಹಲವಾರು ಹಿರಿಯ ಮುಖಂಡರು ಭಾಗವಹಿಸಿದ್ದರು ಎಂದು ಭಾರತೀಯ ಯುವ ಕಾಂಗ್ರೆಸ್ ಹೇಳಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.