ಉಮರ್ ಖಾಲಿದ್ ನ್ಯಾಯಾಂಗ ಬಂಧನ ಅವಧಿ ಡಿಸೆಂಬರ್ 16ರ ವರೆಗೆ ವಿಸ್ತರಣೆ
ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಜವಾಹರ್‌ಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್‌ಯು)ದ ಮಾಜಿ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಡಿಸೆಂಬರ್ 16 ವರೆಗೆ ವಿಸ್ತರಿಸಲಾಗಿದೆ.

ನವದೆಹಲಿ: ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಜವಾಹರ್‌ಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್‌ಯು)ದ ಮಾಜಿ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಡಿಸೆಂಬರ್ 16 ವರೆಗೆ ವಿಸ್ತರಿಸಲಾಗಿದೆ.
ಆರೋಪಿಯ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫೆರೆನ್ಸ್ ಮೂಲಕ ವಿಚಾರಣೆಗೆ ಹಾಜರುಪಡಿಸಲಾಯಿತು. ಆರೋಪಿಗಳ ವಿಚಾರಣೆ ನಡೆಸಿದ ಚೀಫ್ ಮೆಟ್ರೋಪೊಲಿಟನ್ ಮ್ಯಾಜಿಸ್ಟ್ರೇಟ್ ದಿನೇಶ್ ಕುಮಾರ್ ಅವರು, ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನ ವಿಸ್ತರಿಸಿದ್ದಾರೆ.
ಆರೋಪಿಗೆ ಹೆಚ್ಚಿನ ಕಸ್ಟಡಿಯ ಅಗತ್ಯವಿಲ್ಲ. ಹೀಗಾಗಿ ಆರೋಪಿಯ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಸಬಹುದು. ನಂತರ ಆರೋಪಿಗಳ ವಿಚಾರಣೆ ನಡೆಸಲಾಗುವುದು ಎಂದು ಕೋರ್ಟ್ ಹೇಳಿದೆ.
ಈ ವರ್ಷದ ಫೆಬ್ರವರಿಯಲ್ಲಿ ಭುಗಿಲೆದ್ದ ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದಂತೆ, ದೆಹಲಿ ಪೊಲೀಸರು ಕಾನೂನುಬಾಹಿರ ಚಟುವಟಿಕೆಗಳು(ತಡೆಗಟ್ಟುವಿಕೆ) ಕಾಯ್ದೆಯಡಿ ಉಮರ್ ಖಾಲಿದ್ ಅವರನ್ನು ಬಂಧಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


