ದೇಶ

ಬುರೆವಿ ಚಂಡಮಾರುತ: ತಮಿಳುನಾಡು, ಕೇರಳಕ್ಕೆ ನೆರವಿನ ಭರವಸೆ ನೀಡಿದ ಪ್ರಧಾನಿ ಮೋದಿ

ತಮಿಳುನಾಡು ಮತ್ತು ಕೇರಳ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಬುಧವಾರ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಬುರೆವಿ ಚಂಡಮಾರುತದಿಂದ ಉಂಟಾಗುವ ಪರಿಸ್ಥಿತಿಯ ಬಗ್ಗೆ ಚರ್ಚೆ ನಡೆಸಿದ್ದಾರೆ. ಕೇಂದ್ರದಿಂದ ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

ಬುರೆವಿ ಚಂಡಮಾರುತ: ತಮಿಳುನಾಡು, ಕೇರಳಕ್ಕೆ ನೆರವಿನ ಭರವಸೆ ನೀಡಿದ ಪ್ರಧಾನಿ ಮೋದಿ
ಹಡಗುಗಳ ಚಿತ್ರ
Published On :

ನವದೆಹಲಿ: ತಮಿಳುನಾಡು ಮತ್ತು ಕೇರಳ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಬುಧವಾರ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಬುರೆವಿ ಚಂಡಮಾರುತದಿಂದ ಉಂಟಾಗುವ ಪರಿಸ್ಥಿತಿಯ ಬಗ್ಗೆ ಚರ್ಚೆ ನಡೆಸಿದ್ದಾರೆ. ಕೇಂದ್ರದಿಂದ ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

ಡಿಸೆಂಬರ್ 4ಕ್ಕೆ ಚಂಡುಮಾರುತ ತಮಿಳುನಾಡಿಗೆ ಅಪ್ಪಳಿಸುವ ಸಾಧ್ಯತೆಯಿರುವುದಾಗಿ ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ವಿಭಾಗ ಮಂಗಳವಾರ ಹೇಳಿತ್ತು. ಡಿಸೆಂಬರ್ 3 ರಂದು ಕೇರಳ ಮತ್ತು ದಕ್ಷಿಣ ತಮಿಳುನಾಡಿನಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್ ಆಲರ್ಟ್ ಘೋಷಿಸಿದೆ.

ತಮಿಳುನಾಡು ಹಾಗೂ ಕೇರಳ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ದೂರವಾಣಿ ಮೂಲಕ ಚರ್ಚೆ ನಡೆಸಿರುವ ವಿಷಯವನ್ನು ಟ್ವೀಟರ್ ನಲ್ಲಿ ತಿಳಿಸಿರುವ ಪ್ರಧಾನಿ ಮೋದಿ, ಬುರೆವಿ ಚಂಡಮಾರುತದಿಂದ ಉಂಟಾಗುವ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಿದ್ದು, ಉಭಯ ರಾಜ್ಯಗಳಿಗೆ  ಕೇಂದ್ರ ಸರ್ಕಾರ ಎಲ್ಲಾ ರೀತಿಯ ನೆರವು ನೀಡುವುದಾಗಿ ತಿಳಿಸಿದ್ದಾರೆ.

ಚಂಡುಮಾರುತ ಭಾದಿತ ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರ ಸುರಕ್ಷತೆಗಾಗಿ ಪ್ರಾರ್ಥಿಸುವುದಾಗಿ ನರೇಂದ್ರ ಮೋದಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.