72ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಗೆ ಭಾರತ ಆಹ್ವಾನ
ಭಾರತ 2021ರ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರಿಗೆ ಆಹ್ವಾನ ನೀಡಿದೆ.

ನವದೆಹಲಿ: ಭಾರತ 2021ರ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರಿಗೆ ಆಹ್ವಾನ ನೀಡಿದೆ.
ನವೆಂಬರ್ 27ರಂದು ನಡೆದಿರುವ ದೂರವಾಣಿ ಮಾತುಕತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೋರಿಸ್ ಜಾನ್ಸನ್‌ರನ್ನು ಆಹ್ವಾನಿಸಿರುವುದಾಗಿ ವರದಿಯಾಗಿದೆ.
ಜನವರಿ 26, 2021ರಂದು ಭಾರತ 72ನೇ ಗಣರಾಜ್ಯೋತ್ಸವ ಆಚರಿಸುತ್ತಿದ್ದು, ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗುವಂತೆ ಬ್ರಿಟನ್ ಪ್ರಧಾನಿಗೆ ಆಹ್ವಾನ ನೀಡಲಾಗಿದೆ.
ಇಂಗ್ಲೆಂಡ್‌ನಲ್ಲಿ ಮುಂದಿನ ವರ್ಷ ನಡೆಯಲಿರುವ ಜಿ–7 ಶೃಂಗಸಭೆಗೆ ಪ್ರಧಾನಿ ಮೋದಿ ಅವರನ್ನು ಬೋರಿಸ್ ಆಹ್ವಾನಿಸಿದ್ದಾರೆ. ಭಾರತದ ಗಣರಾಜ್ಯೋತ್ಸವದ ಆಚರಣೆಯಲ್ಲಿ ಬೋರಿಸ್ ಮುಖ್ಯ ಅತಿಥಿಯಾಗಿ ಬರುವಂತೆ ಪ್ರಧಾನಿ ಮೋದಿ ಆಹ್ವಾನಿಸಿರುವುದಾಗಿ ವರದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


