ದೇಶ

ಸಿಬಿಐ, ಇಡಿ, ಎನ್ ಐಎ ಕಚೇರಿಗಳಲ್ಲಿ ಸಿಸಿಟಿವಿ ಕ್ಯಾಮರಾ ಹಾಕಿ: ಕೇಂದ್ರ ಸರ್ಕಾರಕ್ಕೆ 'ಸುಪ್ರೀಂ' ನಿರ್ದೇಶನ

ಸಿಬಿಐ, ಇಡಿ ಮತ್ತು ರಾಷ್ಟ್ರೀಯ ತನಿಖಾ ಏಜೆನ್ಸಿಯಂತಹ ಕೇಂದ್ರೀಯ ತನಿಖಾ ಸಂಸ್ಥೆಗಳ ಕಚೇರಿಗಳಲ್ಲಿ ಸಿಸಿಟಿವಿ ಕ್ಯಾಮರಾಗಳು ಮತ್ತು ರೆಕಾರ್ಡಿಂಗ್ ಸಾಧನಗಳನ್ನು ಅಳವಡಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಬುಧವಾರ ನಿರ್ದೇಶನ ನೀಡಿದೆ.

ಸಿಬಿಐ, ಇಡಿ, ಎನ್ ಐಎ ಕಚೇರಿಗಳಲ್ಲಿ ಸಿಸಿಟಿವಿ ಕ್ಯಾಮರಾ ಹಾಕಿ: ಕೇಂದ್ರ ಸರ್ಕಾರಕ್ಕೆ 'ಸುಪ್ರೀಂ' ನಿರ್ದೇಶನ
ಸಿಸಿಟಿವಿ
Published On :

ನವದೆಹಲಿ: ಸಿಬಿಐ, ಇಡಿ ಮತ್ತು ರಾಷ್ಟ್ರೀಯ ತನಿಖಾ ಏಜೆನ್ಸಿಯಂತಹ ಕೇಂದ್ರೀಯ ತನಿಖಾ ಸಂಸ್ಥೆಗಳ ಕಚೇರಿಗಳಲ್ಲಿ ಸಿಸಿಟಿವಿ ಕ್ಯಾಮರಾಗಳು ಮತ್ತು ರೆಕಾರ್ಡಿಂಗ್ ಸಾಧನಗಳನ್ನು ಅಳವಡಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಬುಧವಾರ ನಿರ್ದೇಶನ ನೀಡಿದೆ.

ಪ್ರತಿಯೊಂದು ಪೊಲೀಸ್ ಠಾಣೆಗಳ ಎಲ್ಲಾ ಆಗಮನ, ನಿರ್ಗಮನ ದ್ವಾರಗಳು, ಮುಖ್ಯ ದ್ವಾರ, ಲಾಕ್ ಆಪ್ ಗಳು, ಕಾರಿಡಾರ್ ಗಳು, ರಿಸೆಫ್ ಸನ್, ಮತ್ತು ಲಾಕ್ ಆಪ್  ಕೊಠಡಿಗಳ ಹೊರಗಡೆಯ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಕೆಯನ್ನು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಖಾತ್ರಿಪಡಿಸಿಕೊಳ್ಳಬೇಕು ಎಂದು ನ್ಯಾಯಾಧೀಶ ಆರ್.ಎಫ್. ನಾರಿಮನ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಹೇಳಿದೆ.

ಮಾನವ ಹಕ್ಕುಗಳ ಉಲ್ಲಂಘನೆ ಪರಿಶೀಲನೆಗಾಗಿ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸುವಂತೆ ಉನ್ನತ ನ್ಯಾಯಾಲಯ 2018ರಲ್ಲಿ ಆದೇಶಿಸಿತ್ತು.

ರಾತ್ರಿಯಲ್ಲೂ ನೋಡಬಹುದಾದ ಸಾಧನಗಳನ್ನು ಸಿಸಿಟಿವಿ ವ್ಯವಸ್ಥೆಗಳು ಹೊಂದಿರಬೇಕು, ಆಡಿಯೋ, ವಿಡಿಯೋ ಫುಟೇಜ್ ಹೊಂದಿರಬೇಕು, ಕನಿಷ್ಠವೆಂದರೂ ಒಂದು ವರ್ಷದವರೆಗೂ ಮಾಹಿತಿಯನ್ನು ಸಂಗ್ರಹಿಸಿಡಬಲ್ಲಾ ಇಂತಹ ಸಿಸಿಟಿವಿ ಕ್ಯಾಮರಾಗಳನ್ನು ಕೇಂದ್ರ, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ಕಡ್ಡಾಯವಾಗಿ ಖರೀದಿಸಬೇಕು ಎಂದು ನ್ಯಾಯಪೀಠ ಹೇಳಿತು.

ಆರು ತಿಂಗಳಿಗೂ ಕಡಿಮೆ ಇಲ್ಲದ ರೀತಿಯಲ್ಲಿ ಒಂದು ನಿರ್ದಿಷ್ಠ ಸಮಯದವರೆಗೂ ಸಿಸಿಟಿವಿ ದೃಶ್ಯಾವಳಿಗಳನ್ನು ಸಂರಕ್ಷಿಸಬೇಕು, ಮಾನವ ಹಕ್ಕುಗಳ ಉಲ್ಲಂಘನೆ ಸಂದರ್ಭದಲ್ಲಿ ಸಂತ್ರಸ್ತರು ತಮ್ಮನ್ನು ರಕ್ಷಿಸಿಕೊಳ್ಳುವ ಹಕ್ಕನ್ನು ಹೊಂದಿರುತ್ತಾರೆ ಎಂದು ನ್ಯಾಯಪೀಠ ತಿಳಿಸಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.