ಶುಕ್ರವಾರ ಮುಂಜಾನೆ ತಮಿಳುನಾಡು ದಾಟಲಿರುವ ಬುರೆವಿ ಚಂಡಮಾರುತ
ಪಂಬನ್ ಸಮೀಪದಲ್ಲಿರುವ ಬುರೆವಿ ಚಂಡಮಾರುತ ಗಂಟೆಗೆ 9 ಕಿಲೋ ಮೀಟರ್ ವೇಗದಲ್ಲಿ ಪಶ್ಚಿಮದತ್ತ ಚಲಿಸುತ್ತಿದ್ದು, ಪಂಬನ್‌ನಿಂದ ನೈರುತ್ಯಕ್ಕೆ 20 ಕಿ.ಮೀ ಮತ್ತು ಕನ್ಯಾಕುಮಾರಿಯ ಪೂರ್ವ-ಈಶಾನ್ಯಕ್ಕೆ 210 ಕಿ.ಮೀ ದೂರದಲ್ಲಿರುವ ರಾಮನಾಥಪುರಂ ಕರಾವಳಿಯ ಸಮೀಪದಲ್ಲಿದೆ.

ಚೆನ್ನೈ: ಪಂಬನ್ ಸಮೀಪದಲ್ಲಿರುವ ಬುರೆವಿ ಚಂಡಮಾರುತ ಗಂಟೆಗೆ 9 ಕಿಲೋ ಮೀಟರ್ ವೇಗದಲ್ಲಿ ಪಶ್ಚಿಮದತ್ತ ಚಲಿಸುತ್ತಿದ್ದು, ಪಂಬನ್‌ನಿಂದ ನೈರುತ್ಯಕ್ಕೆ 20 ಕಿ.ಮೀ ಮತ್ತು ಕನ್ಯಾಕುಮಾರಿಯ ಪೂರ್ವ-ಈಶಾನ್ಯಕ್ಕೆ 210 ಕಿ.ಮೀ ದೂರದಲ್ಲಿರುವ ರಾಮನಾಥಪುರಂ ಕರಾವಳಿಯ ಸಮೀಪದಲ್ಲಿದೆ.
ಗುರುವಾರ ರಾತ್ರಿ ಮತ್ತು ಶುಕ್ರವಾರ ಮುಂಜಾನೆ 50-60 ರಿಂದ 70 ಕಿಲೋ ಮೀಟರ್ ವೇಗದ ಗಾಳಿಯೊಂದಿಗೆ ರಾಮನಾಥಪುರಂ ಮತ್ತು ತುತುಕೂಡಿಯನ್ನು ದಾಟಲಿದೆ. ಇದು ಶುಕ್ರವಾರ ಮುಂಜಾನೆ ಮತ್ತಷ್ಟು ದುರ್ಬಲಗೊಳ್ಳುವ ಸಾಧ್ಯತೆಯಿದೆ ಎಂದು ಪ್ರಾದೇಶಿಕ ಹವಾಮಾನ ಕೇಂದ್ರದ ಸೈಕ್ಲೋನ್ ವಾರ್ನಿಂಗ್ ಸೆಂಟರ್ ನಿರ್ದೇಶಕ ಎನ್. ಪುವಿಯಾರಸನ್ ಹೇಳಿದ್ದಾರೆ.
ರಾಮನಾಥಪುರಂ, ತುತುಕೂಡಿ, ತಿರುನೆಲ್ವೇಲಿ,ಕನ್ಯಾಕುಮಾರಿ, ತೆಂಕಸಿ, ವಿರುಧುನಗರ, ಮಧುರೈ, ಮತ್ತು ಶಿವಗಂಗೈ ಜಿಲ್ಲೆಗಳಲ್ಲಿ ಶನಿವಾರದವರೆಗೂ ಭಾರೀ ಮಳೆ ಮುಂದುವರೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


