ಭಾರತದಲ್ಲಿ ಕೊರೋನಾ ಅಬ್ಬರ ಇಳಿಕೆ: ದೇಶದಲ್ಲಿಂದು 36,594 ಕೇಸ್ ಪತ್ತೆ
ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಮುಖವಾಗಿದೆ. ಕಳೆದ 24 ಗಂಟೆಯಲ್ಲಿ 36,594 ಮಂದಿಗೆ ಕೊರೋನ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಈವರೆಗೆ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 95,71,559ಕ್ಕೆ ಏರಿಕೆಯಾಗಿದೆ.

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಮುಖವಾಗಿದೆ. ಕಳೆದ 24 ಗಂಟೆಯಲ್ಲಿ 36,594 ಮಂದಿಗೆ ಕೊರೋನ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಈವರೆಗೆ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 95,71,559ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 540 ಮಂದಿ ಸೋಂಕಿಗೆ ಬಲಿಯಾಗಿದ್ದು, ಇದುವರೆಗೂ ಮೃತಪಟ್ಟವರ ಸಂಖ್ಯೆ 1,39,188ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಹೊಸ ಪ್ರಕರಣಗಳಿಗೆ ಹೋಲಿಸಿದರೆ ಗುಣಮುಖರಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಒಂದು ದಿನದಲ್ಲಿ 42,916 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೂ 90,16,289 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗಳಿಗೆ ಹಿಂತಿರುಗಿದ್ದಾರೆ.
ದೇಶದಲ್ಲಿ ಇದೀಗ 4,16,082 ಸಕ್ರಿಯ ಪ್ರಕರಣಗಳಿವೆ. ಕೊರೋನಾ ಸೋಂಕು ಹರಡುವಿಕೆಗೆ ಕಡಿವಾಣ ಹಾಕಲು ತಪಾಸಣೆಯನ್ನು ಹೆಚ್ಚಿಸಲಾಗುತ್ತಿದೆ.
ಭಾರತದಲ್ಲಿ ಒಂದೇ ದಿನ 11,70,102 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 14,47,27,749 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


