ವಿಶ್ವವು ಭಾರತವನ್ನು ವಿಶ್ವಾಸಾರ್ಹ, ಭರವಸೆಯ ಪಾಲುದಾರನಾಗಿ ನೋಡುತ್ತದೆ: ಪ್ರಧಾನಿ ಮೋದಿ
ಕೋವಿಡ್-19 ಬಿಕ್ಕಟ್ಟಿನ ಸಂದರ್ಭದಲ್ಲಿ ದೇಶದಲ್ಲಿ ದಾಖಲೆ ಪ್ರಮಾಣದಲ್ಲಿ ಹೂಡಿಕೆಯಾಗಿದ್ದು, ವಿಶ್ವವು ಭಾರತವನ್ನು ವಿಶ್ವಾಸಾರ್ಹ, ಭರವಸೆಯ ಪಾಲುದಾರನಾಗಿ ನೋಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ನವದೆಹಲಿ: ಕೋವಿಡ್-19 ಬಿಕ್ಕಟ್ಟಿನ ಸಂದರ್ಭದಲ್ಲಿ ದೇಶದಲ್ಲಿ ದಾಖಲೆ ಪ್ರಮಾಣದಲ್ಲಿ ಹೂಡಿಕೆಯಾಗಿದ್ದು, ವಿಶ್ವವು ಭಾರತವನ್ನು ವಿಶ್ವಾಸಾರ್ಹ, ಭರವಸೆಯ ಪಾಲುದಾರನಾಗಿ ನೋಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಐಐಟಿ 2020 ಜಾಗೃತಿ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ ಮೋದಿ, ಪ್ರಗತಿ, ದಕ್ಷತೆ ಹಾಗೂ ಪಾರದರ್ಶಕತೆಯ ತ್ವತ್ವಗಳಿಗೆ ತಮ್ಮ ಸರ್ಕಾರ ಬದ್ಧವಾಗಿದೆ ಎಂದರು.
ಪ್ರಗತಿಯಿಂದ ಯಾವುದೇ ಕ್ಷೇತ್ರ ಹಿಂದೆ ಬಿದ್ದಿಲ್ಲ. ಕೃಷಿ, ಪರಮಾಣು ಶಕ್ತಿ, ಇಂಧನ, ರಕ್ಷಣೆ, ಶಿಕ್ಷಣ, ಆರೋಗ್ಯ, ಮೂಲಸೌಕರ್ಯ, ಹಣಕಾಸು, ಬ್ಯಾಂಕಿಂಗ್, ತೆರಿಗೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ಪ್ರಗತಿ ಕಾಣುತ್ತಿರುವುದಾಗಿ ಹೇಳಿದರು.
ಕಾರ್ಮಿಕ ವಲಯದಲ್ಲಿ ಗಮನಾರ್ಹ ರೀತಿಯಲ್ಲಿ ಸುಧಾರಣೆಯಾಗಿದೆ. 44 ಕೇಂದ್ರ ಕಾರ್ಮಿಕ ಕಾನೂನುಗಳನ್ನು ನಾಲ್ಕು ಸಂಕೇತಗಳಲ್ಲಿ ಒಟ್ಟುಗೂಡಿಸಲಾಗಿದೆ. ನಮ್ಮ ಕಾರ್ಪೋರೇಟ್ ತೆರಿಗೆ ವಿಶ್ವದಲ್ಲಿಯೇ ಅತ್ಯಂತ ಕಡಿಮೆಯಾಗಿದೆ ಎಂದರು.
ಕೋವಿಡ್-19 ಸಂಕಷ್ಟದ ಸಂದರ್ಭದಲ್ಲಿ ದೇಶದಲ್ಲಿ ದಾಖಲೆ ಪ್ರಮಾಣದ ಹೂಡಿಕೆಯಾಗಿದೆ. ಇದರಲ್ಲಿ ತಂತ್ರಜ್ಞಾನ ಕ್ಷೇತ್ರದಿಂದಲೇ ಅಪಾರ ಪ್ರಮಾಣದ ಹೂಡಿಕೆಯಾಗಿದೆ ಎಂದು ನರೇಂದ್ರ ಮೋದಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


