ಏಕ ಬಳಕೆ ಪ್ಲಾಸ್ಟಿಕ್ ಗೆ ಪರ್ಯಾಯ ಕಂಡುಕೊಳ್ಳುವಲ್ಲಿ ಭಾರತ ಯಶಸ್ವಿ: ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್
ಏಕ ಬಳಕೆಯ ಪ್ಲಾಸ್ಟಿಕ್‌ಗೆ ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳುವಲ್ಲಿ ಮತ್ತು ಅದನ್ನು ಅಳವಡಿಸಿಕೊಳ್ಳುವಲ್ಲಿ ಭಾರತವು ಯಶಸ್ವಿಯಾಗಿದೆ ಎಂದು ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.

ನವದೆಹಲಿ: ಏಕ ಬಳಕೆಯ ಪ್ಲಾಸ್ಟಿಕ್‌ಗೆ ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳುವಲ್ಲಿ ಮತ್ತು ಅದನ್ನು ಅಳವಡಿಸಿಕೊಳ್ಳುವಲ್ಲಿ ಭಾರತವು ಯಶಸ್ವಿಯಾಗಿದೆ ಎಂದು ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.
ದೇಶದಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಅನ್ನು ಈಗಾಗಲೇ ನಿಷೇಧಿಸಲಾಗಿದ್ದು, ಇದರ ಬಳಕೆ ನಿಲ್ಲಿಸುವ ಬಗ್ಗೆ ತಿಳಿವಳಿಕೆ ಮೂಡಿಸಲು ಅಭಿಯಾನಗಳನ್ನು ನಡೆಸಲಾಗುತ್ತಿದೆ. ಅಂತೆಯೇ ಏಕ ಬಳಿಕಯ ಪ್ಲಾಸ್ಟಿಕ್ ಗೆ ಪರ್ಯಾಯ ಕಂಡುಕೊಳ್ಳುವ ವಿಚಾರದಲ್ಲಿ ನಾವು ಅದ್ಭುತ ಯಶಸ್ಸು ಸಾಧಿಸಿದ್ದು, ಇದಕ್ಕೊಂದು ತಾರ್ಕಿಕ ಅಂತ್ಯ ನೀಡಲಾಗುವುದು ಎಂದು ಹೇಳಿದರು.
ಹವಾಮಾನ ಬದಲಾವಣೆಗೆ ಸಂಬಂಧಿಸಿ ವಿಶ್ವಸಂಸ್ಥೆಯು ರೂಪಿಸಿರುವ ಚೌಕಟ್ಟಿಗೆ ಸಂಬಂಧಿಸಿ ಯುಎನ್‌ಎಫ್‌ಸಿಸಿ ಕಾರ್ಯನಿರ್ವಾಹಕ ಕಾರ್ಯದರ್ಶಿ ಪೆಟ್ರೀಷಿಯಾ ಎಸ್ಪಿನೋಜ ಜತೆ ವರ್ಚುವಲ್ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, 'ಇಂದು ಅನೇಕ ದೇಶಗಳು ಹವಾಮಾನ ಬದಲಾವಣೆ ಕಾರ್ಯಸೂಚಿ ಸಾಕಾರಗೊಳಿಸುವ ಗಡುವನ್ನು 2050ಕ್ಕೆ ಮುಂದೂಡುತ್ತಿವೆ. ದೀರ್ಘಾವಧಿಯ ಗುರಿಯಿಂದಲೂ ಈಗಲೇ ಕ್ರಮ ಕೈಗೊಳ್ಳಬೇಕಾಗಿರುವುದು ಅಗತ್ಯ. ಭಾರತ ಮತ್ತು ಫ್ರಾನ್ಸ್ ಹವಾಮಾನ ಬದಲಾವಣೆ ಮತ್ತು ಸುಸ್ಥಿರತೆಯ ಬಗ್ಗೆ ಜಂಟಿ ಪ್ರಯತ್ನಗಳನ್ನು ಮಾಡುವ ಪ್ರಸ್ತಾಪವನ್ನು ನಾನು ಸ್ವಾಗತಿಸುತ್ತೇನೆ. ವಿಶೇಷವಾಗಿ ಏಕ-ಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ತಡೆಯುವ ಕಡೆಗೆ ನಮ್ಮ ಪ್ರಯತ್ನ ಸಾಗಬೇಕಿದೆ ಎಂದು ಜಾವಡೇಕರ್ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


