ನೂತನ ಸಂಸತ್ ಭವನ ಕಟ್ಟಡಕ್ಕೆ ಡಿಸೆಂಬರ್ 10 ರಂದು ಪ್ರಧಾನಿ ಮೋದಿ ಭೂಮಿ ಪೂಜೆ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ
ನೂತನ ಸಂಸತ್ ಭವನ ಕಟ್ಟಡ ನಿರ್ಮಾಣಕ್ಕಾಗಿ ಇದೇ ಡಿಸೆಂಬರ್ 10ರಂದು ಪ್ರಧಾನಿ ನರೇಂದ್ರ ಮೋದಿ ಅವರು ಭೂಮಿ ಪೂಜೆ ಮಾಡಲಿದ್ದಾರೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ.

ನವದೆಹಲಿ: ನೂತನ ಸಂಸತ್ ಭವನ ಕಟ್ಟಡ ನಿರ್ಮಾಣಕ್ಕಾಗಿ ಇದೇ ಡಿಸೆಂಬರ್ 10ರಂದು ಪ್ರಧಾನಿ ನರೇಂದ್ರ ಮೋದಿ ಅವರು ಭೂಮಿ ಪೂಜೆ ಮಾಡಲಿದ್ದಾರೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ.
ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಸಂಬಂಧ ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ಆಗಮಿಸಿದ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ ನೂತನ ಸಂಸತ್ ಕಟ್ಟಡ ನಿರ್ಮಾಣದ ಕುರಿತು ಮಾತನಾಡಿದ ಅವರು ಇದೇ ಡಿಸೆಂಬರ್ 10ರಂದು ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಂಸತ್ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ, ಭೂಮಿ ಪೂಜೆಯಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲ್ಲಿದ್ದಾರೆ ಎಂದು ಹೇಳಿದರು.
ಕಳೆದ ಸೆಪ್ಟೆಂಬರ್ ನಲ್ಲಿ ಟಾಟಾ ಪ್ರಾಜೆಕ್ಟ್ಸ್ ಲಿಮಿಟೆಡ್ ಹೊಸ ಸಂಸತ್ತು ಭವನವನ್ನು ನಿರ್ಮಿಸುವ ಬಿಡ್ಡಿಂಗ್ ಪ್ರಕ್ರಿಯೆಯನ್ನು ಗೆದ್ದುಕೊಂಡಿದ್ದು, 861.90 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿಕೊಡಲಿದೆ.
ಈಗಿರುವ ಸಂಸತ್ತು ಬ್ರಿಟಿಷರ ಕಾಲದ್ದಾಗಿದ್ದು, ಎಡ್ವಿನ್ ಲುಟ್ಯಿನ್ಸ್ ಮತ್ತು ಹರ್ಬರ್ಟ್ ಬೇಕರ್ ಅವರು ವಿನ್ಯಾಸಗೊಳಿಸಿ ನಿರ್ಮಿಸಿದ್ದರು. ಇದನ್ನು ಕಟ್ಟಿದ್ದು 1921ರ ಫೆಬ್ರವರಿ 12ರಂದು ಶಂಕುಸ್ಥಾಪನೆ ನೆರವೇರಿಸಿ ಮುಂದಿನ ಆರು ವರ್ಷಗಳಲ್ಲಿ ಆಗಿನ ಕಾಲದಲ್ಲಿ 83 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಪೂರ್ಣಗೊಳಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


