19 ವರ್ಷಗಳ ಬಳಿಕ ತಲೆಮರೆಸಿಕೊಂಡಿದ್ದ ನಿಷೇಧಿತ ಸಿಮಿ ಸಂಘಟನೆಯ ಸದಸ್ಯನ ಬಂಧನ
ನಿಷೇಧಿತ ಸ್ಟುಡೆಂಟ್ಸ್ ಇಸ್ಲಾಮಿಕ್ ಮೂವ್ ಮೆಂಟ್ ಆಫ್ ಇಂಡಿಯಾ-ಸಿಮಿ ಸಂಘಟನೆಯ ತಲೆಮರೆಸಿಕೊಂಡಿದ್ದ ಸದಸ್ಯನೊಬ್ಬನನ್ನು 19 ವರ್ಷಗಳ ಬಳಿಕ ದೆಹಲಿ ಪೊಲೀಸ್ ವಿಶೇಷ ಸೆಲ್ ಬಂಧಿಸಿದೆ ಎಂದು ಭಾನುವಾರ ಪೊಲೀಸರು ತಿಳಿಸಿದ್ದಾರೆ.

ನವದೆಹಲಿ: ನಿಷೇಧಿತ ಸ್ಟುಡೆಂಟ್ಸ್ ಇಸ್ಲಾಮಿಕ್ ಮೂವ್ ಮೆಂಟ್ ಆಫ್ ಇಂಡಿಯಾ-ಸಿಮಿ ಸಂಘಟನೆಯ ತಲೆಮರೆಸಿಕೊಂಡಿದ್ದ ಸದಸ್ಯನೊಬ್ಬನನ್ನು 19 ವರ್ಷಗಳ ಬಳಿಕ ದೆಹಲಿ ಪೊಲೀಸ್ ವಿಶೇಷ ಸೆಲ್ ಬಂಧಿಸಿದೆ ಎಂದು ಭಾನುವಾರ ಪೊಲೀಸರು ತಿಳಿಸಿದ್ದಾರೆ.
ದೇಶದ್ರೋಹ ಪ್ರಕರಣದಲ್ಲಿ ಕಳೆದ 19 ವರ್ಷಗಳಿಂದ ಪರಾರಿಯಾಗಿದ್ದ ಅಬ್ದುಲ್ಲಾ ದಾನಿಷ್ ಎಂಬ ಸದಸ್ಯನನ್ನು ಜಾಕಿರ್ ನಗರ ಪ್ರದೇಶದಿಂದ ಶನಿವಾರ ದೆಹಲಿ ಪೊಲೀಸರು ಬಂಧಿಸಿದ್ದಾರೆ. ದೆಹಲಿಯ ಸುತ್ತ ಮುತ್ತ ಇರುವ ಬಗ್ಗೆ ಮಾಹಿತಿಯ ಆಧಾರದ ಮೇಲೆ ದಾಳಿ ನಡೆಸಿ ಬಂಧಿಸಲಾಗಿದೆ.
2001 ರಲ್ಲಿ ಸಿಮಿ ಮೇಲೆ ನಿಷೇಧ ಹೇರಿದಾಗ ಪೊಲೀಸರು ನಡೆಸಿದ ದಾಳಿಯ ವೇಳೆ ಆತ ಪರಾರಿಯಾಗಿದ್ದ. ಆದೆ ಈ ವೇಳೆ ಇತರ ಅನೇಕ ಸದಸ್ಯರನ್ನು ಬಂಧಿಸಲಾಗಿತ್ತು. ಮಾತ್ರವಲ್ಲ ಪ್ರಚೋದನಕಾರಿ ಸಾಹಿತ್ಯ, ಇತರ ವಸ್ತುಗಳನ್ನು ಸಹ ಜಾಮಿಯಾ ನಗರದ ಪ್ರಧಾನ ಕಚೇರಿಯಿಂದ ವಶಪಡಿಸಿಕೊಳ್ಳಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


